ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಮಧ್ಯಪ್ರವೇಶಕ್ಕೆ ಆಗ್ರಹ

ಲಂಕಾ ನೌಕಾಪಡೆ ವಶದಲ್ಲಿ 14 ಭಾರತೀಯ ಮೀನುಗಾರರು
Last Updated 3 ಜೂನ್ 2015, 5:49 IST
ಅಕ್ಷರ ಗಾತ್ರ

ರಾಮೇಶ್ವರಂ/ತಮಿಳುನಾಡು (ಪಿಟಿಐ): ಜಲ ಗಡಿ ಉಲ್ಲಂಘಿಸಿದ ಆರೋಪದ ಮೇಲೆ ಶ್ರೀಲಂಕಾದ ನೌಕಾಪಡೆ ಬಂಧಿಸಿರುವ 14 ಭಾರತೀಯ ಮೀನುಗಾರರನ್ನು ಬಿಡುಗಡೆಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಮೀನುಗಾರರ ಸಂಘಟನೆಗಳ ಸದಸ್ಯರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಜೂನ್‌ 12ರ ಒಳಗೆ  ಮೀನುಗಾರರ ಬಿಡುಗಡೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮೀನುಗಾರರ ಒಕ್ಕೂಟ ಎಚ್ಚರಿಕೆ ನೀಡಿದೆ.

ಕಚತಿವು ಎಂಬಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿದೆ.  ಆದರೆ, ಇವರು ಯಾರೂ ಅಂತರರಾಷ್ಟ್ರೀಯ ಜಲಗಡಿ ಉಲ್ಲಂಘಿಸಿಲ್ಲ ಎಂದು ಮೀನುಗಾರಿಕೆ ಒಕ್ಕೂಟದ ಅಧ್ಯಕ್ಷ ಎಸ್‌. ಇಮ್ರಿತ್‌ ಸುದ್ದಿಗಾರರಿಗೆ ತಿಳಿಸಿದರು.

ಮೀನುಗಾರರ ಬಿಡುಗಡೆಗೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಮೋದಿ ಅವರ ಮನವೊಲಿಕೆಗೆ ಮುಂದಾಗಬೇಕು ಎಂದು ಸಂಘಟನೆಯ ಸದಸ್ಯರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT