ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ವಿರುದ್ಧ ಅವಹೇಳನಕಾರಿ ಸಂದೇಶ: ನಿಷ್ಪಕ್ಷಪಾತ ತನಿಖೆ

Last Updated 26 ಮೇ 2014, 19:47 IST
ಅಕ್ಷರ ಗಾತ್ರ

ಪಣಜಿ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್‌­ಬುಕ್‌ನಲ್ಲಿ ಅವಹೇಳನಕಾರಿ ಸಂದೇಶ ರವಾನಿಸಿದ್ದ ಎಂಜಿನಿಯರ್‌ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತ­ವಾಗಿ ನಡೆಸಲಾಗುವುದು ಎಂದು ಗೋವಾ ಜಿಲ್ಲಾ ಪೊಲೀಸ್‌ ವರಿಷ್ಠಾ­ಧಿ­­ಕಾರಿ ಟಿ. ಮೋಹನ್‌ ತಿಳಿಸಿದ್ದಾರೆ.

ಸಾಮಾಜಿಕ ಹೋರಾಟಗಾರರ ನಿಯೋಗದ ಜತೆ ಮಾತನಾಡಿದ ಮೋಹನ್‌ ಅವರು, ದೇವು ಚೋಡ­ನ­ಕರ್‌ ವಿರುದ್ಧ ದಾಖ­ಲಾಗಿರುವ ಪ್ರಕರಣದ ತನಿಖೆಯನ್ನು ಪ್ರಾಮಾ­ಣಿಕ­ವಾಗಿ ನಡೆಸಲಾಗು­ವುದು ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆ ಸಂದರ್ಭ­ದಲ್ಲಿ ಮೋದಿ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಹೇಳಿಕೆಯನ್ನು ದಾಖಲಿಸಿದ್ದು, ಆತನ ವಿರುದ್ಧ ಗೋವಾ ಮೂಲದ ಉದ್ಯಮಿ ಅತುಲ್‌ ಪೈ ಕಾನೆ ಸೈಬರ್‌್ ಅಪರಾಧ ಘಟಕದಲ್ಲಿ ಪ್ರಕರಣ ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT