ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ವಿರುದ್ಧ ದೂರು ಸಲ್ಲಿಸಿದ ರಾಷ್ಟ್ರಪತಿ ಭವನ

Last Updated 5 ಜುಲೈ 2015, 8:55 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಐಪಿಎಲ್‌ನ ಮಾಜಿ ಮುಖ್ಯಸ್ಥ ಲಲಿತ್‌ ಮೋದಿ ವಿರುದ್ಧ ರಾಷ್ಟ್ರಪತಿ ಭವನ ದೆಹಲಿ ಪೊಲೀಸರಿಗೆ ದೂರು ನೀಡಿದೆ.

ಲಲಿತ್‌ ಮೋದಿ ಅವರು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಕಾರ್ಯದರ್ಶಿ ಒಮಿತ್‌ ಪೌಲ್‌ ಹಣಕಾಸು ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದರು.

ಈ ಸಂಬಂಧ ರಾಷ್ಟ್ರಪತಿ ಭವನದ ಅಧಿಕಾರಿಗಳು ದೆಹಲಿ ಪೊಲೀಸರಿಗೆ ದೂರು ನೀಡಿದ್ದು ಮೋದಿ ಟ್ವೀಟ್‌ ಮಾಡಿದ ಪ್ರತಿಯನ್ನು ದೂರಿನಲ್ಲಿ ದಾಖಲಿಸಿದ್ದಾರೆ.

ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ಕಾನೂನು ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಪೊಲೀಸ್‌ ಆಯುಕ್ತರಾದ ಬಿ.ಎಸ್‌.ಬಸ್ಸಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT