ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎಸ್‌ಸಿ ಪರೀಕ್ಷೆ ವಿವಾದ: ತೀವ್ರಗೊಂಡ ಪ್ರತಿಭಟನೆ

Last Updated 5 ಆಗಸ್ಟ್ 2014, 10:00 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ನಾಗರಿಕ ಸೇವಾ ಪರೀಕ್ಷಾ ಆಕಾಂಕ್ಷಿಗಳು ಈಗಿನ ಸಿಸ್ಯಾಟ್‌ ಪರೀಕ್ಷೆ ಪದ್ಧತಿಯನ್ನು (ಸಿವಿಲ್‌ ಸರ್ವೀಸಸ್‌ ಆ್ಯಪ್ಟಿಟ್ಯೂಡ್‌ ಟೆಸ್ಟ್‌ –ಸಿಎಸ್‌ಎಟಿ) ರದ್ದುಪಡಿಸುವಂತೆ ಆಗ್ರಹಿಸಿ ಮಂಗಳವಾರ ಇಲ್ಲಿನ ಜಂತರ್‌ ಮಂತರ್‌ ಮೈದಾನದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ಕೇಂದ್ರ ಸರ್ಕಾರ ಮೆರಿಟ್‌ ಅಂಕಗಳಿಗೆ ಇಂಗ್ಲಿಷ್‌ ಭಾಷೆಯ ಅಂಕಗಳನ್ನು ಪರಿಗಣಿಸದಿರುವುದು ಮತ್ತು 2011ರ ಅಭ್ಯರ್ಥಿಗಳಿಗೆ 2015ರಲ್ಲಿ ಪರೀಕ್ಷೆಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಘೋಷಣೆ ಮಾಡಿದ ಬೆನ್ನಲ್ಲೆ ಐಎಎಸ್‌ ಪರಿಕ್ಷೆ ಅಭ್ಯರ್ಥಿಗಳು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ನಾಗರಿಕ ಸೇವಾ ಪರೀಕ್ಷೆಗಳನ್ನು ತೆಗೆದುಕೊಳ್ಳುವವರು  ಸಿಸ್ಯಾಟ್‌  ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ.

ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ವಿಫಲ ಯತ್ನ ನಡೆಸಿದ ಬಗ್ಗೆ ವರದಿಯಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಈ ಪ್ರತಿಭಟನೆಗೆ ಎಎಪಿ ಪಕ್ಷದ ಮುಖಂಡ ಯೋಗೇಂದ್ರ ಯಾದವ್‌ ಕೂಡ ಸಾಥ್‌ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT