ನವದೆಹಲಿ (ಪಿಟಿಐ): ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) ನಡೆಸಿರುವ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ 16 ಸಾವಿರ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.
ಪರೀಕ್ಷೆ ನಡೆಸಿದ 50 ದಿನಗಳಲ್ಲಿ ಫಲಿತಾಂಶ ಪ್ರಕಟಿಸಿ ಯುಪಿಎಸ್ಸಿ ದಾಖಲೆ ನಿರ್ಮಿಸಿದೆ.
ಕಳೆದ ಆಗಸ್್ಟ 24ರಂದು ನಡೆದ ಪೂರ್ವಭಾವಿ ಪರೀಕ್ಷೆಗೆ 4,52,334 ಅಭ್ಯರ್ಥಿಗಳು ಹಾಜರಾಗಿದ್ದರು. ಅವರಲ್ಲಿ 16, 933 ಅಭ್ಯರ್ಥಿಗಳು ಉತ್ತೀರ್ಣರಾಗಿ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ ಎಂದು ಆಯೋಗದ ಕಾರ್ಯದರ್ಶಿ ಅಶಿಮ್ ಖುರಾನಾ ತಿಳಿಸಿದ್ದಾರೆ.