ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೂರಿಯಾ ಬೆಲೆ ಹೆಚ್ಚಳ ಇಲ್ಲ

Last Updated 8 ಜುಲೈ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಯೂರಿಯಾ ಬೆಲೆ ಹೆಚ್ಚಿಸುವ ಯಾವುದೇ ಪ್ರಸ್ತಾವ ಸರ್ಕಾ­ರದ ಮುಂದೆ ಇಲ್ಲ ಎಂದು ಕೇಂದ್ರ ರಸ­ಗೊಬ್ಬರ ಸಚಿವ ಅನಂತಕುಮಾರ್‌ ಹೇಳಿದರು.

ರೈತರಿಗೆ ಅಗತ್ಯ ಇರುವಷ್ಟು ಯೂರಿ­ಯಾವನ್ನು ಸಬ್ಸಿಡಿ ದರದಲ್ಲಿ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಮಂಗಳ­ವಾರ ಲೋಕಸಭೆಯಲ್ಲಿ ತಿಳಿಸಿದರು.

ದೇಶದಲ್ಲಿ 31 ದಶಲಕ್ಷ ಟನ್‌ ರಸಗೊಬ್ಬರದ ಬೇಡಿಕೆ ಇದೆ. ಆದರೆ, 22 ದಶಲಕ್ಷ ಟನ್‌ ಮಾತ್ರ ಉತ್ಪಾದನೆ ಆಗು­ತ್ತಿದೆ. ಉಳಿದದ್ದನ್ನು ಆಮದು ಮಾಡಿ­ಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಪ್ರತಿ ತಿಂಗಳು ಅಗತ್ಯವಿರುವ ರಸಗೊಬ್ಬರ ಪ್ರಮಾಣದ ಬಗ್ಗೆ ಆಯಾ ರಾಜ್ಯಗಳ ಕೃಷಿ ಇಲಾಖೆಯಿಂದ ಮಾಹಿತಿ ಪಡೆದು ಬಿತ್ತನೆ ಕಾರ್ಯ ಆರಂಭವಾಗುವ ಮೊದಲೇ   ಪೂರೈಸ­ಲಾಗುತ್ತಿದೆ. ಎಲ್ಲಿಯೂ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಷ್ಯಾ, ಕೆನಡಾ ಸೇರಿದಂತೆ ವಿವಿಧ ರಾಷ್ಟ್ರಗಳ ಜಂಟಿ ಸಹಭಾಗಿತ್ವದಲ್ಲಿ ರಸಗೊಬ್ಬರ ಉತ್ಪಾದಿಸಲು ನಿರ್ಧರಿ­ಸಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಇರುವ ಭೂಮಿಯನ್ನು ಸ್ವಾಧೀನ­ಪಡಿಸಿಕೊಳ್ಳುವ ಪ್ರಕ್ರಿಯೆ ಶುರುವಾಗಿದೆ. ಮುಂದಿನ ದಿನಗಳಲ್ಲಿ ರಸಗೊಬ್ಬರ ಉತ್ಪಾ­ದನೆಯಲ್ಲಿ ಭಾರತ ಸ್ವಾವಲಂಬಿ­ಯಾಗಲಿದೆ ಎಂದರು.

ಓಮನ್‌, ಸೆನೆಗಲ್‌, ಜೋರ್ಡಾನ್‌, ಮೊರಾಕೊ ರಾಷ್ಟ್ರಗಳ ಜಂಟಿ ಸಹಭಾಗಿತ್ವದಲ್ಲಿ ಈಗಾಗಲೇ ರಸ­ಗೊಬ್ಬರ ಉತ್ಪಾದಿಸಲಾಗುತ್ತಿದೆ ಎಂದು ತಿಳಿಸಿದರು.

ರಾಸಾಯನಿಕಗಳ ಬದಲು, ಸಾವಯವ ಗೊಬ್ಬರ ಬಳಸುವಂತೆ ರೈತರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT