ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆ ಅನುಷ್ಠಾನದಿಂದ ದೇಶದ ಪ್ರಗತಿ: ಸುಬ್ಬರಾವ್‌

Last Updated 3 ಜುಲೈ 2015, 5:04 IST
ಅಕ್ಷರ ಗಾತ್ರ

ಉಡುಪಿ: ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನೇಕ ಕಾರ್ಯಗಳು ಗ್ರಾಮಾ  ಭಿವೃದ್ಧಿ ಯೋಜನೆಯ ಮೂಲಕ ನಡೆ ಯುತ್ತಿದೆ. ಇದನ್ನು ಸರಿಯಾಗಿ ಅನುಷ್ಠಾನ ಮಾಡಿದಲ್ಲಿ ದೇಶದ ಪ್ರಗತಿ ಸಾಧ್ಯ’ ಎಂದು ಸಿಂಡಿಕೇಟ್‌ ಬ್ಯಾಂಕ್‌ನ ಮುಖ್ಯ ಪ್ರಬಂಧಕ ಕೆ. ಸುಬ್ಬರಾವ್‌ ಹೇಳಿದರು.

ಉಡುಪಿ ಅಂಬಲಪಾಡಿಯ ರಾಷ್ಟ್ರೀಯ ಸ್ವ ಸಹಾಯ ಸಂಘ ತರಬೇತಿ ಸಂಸ್ಥೆಯಲ್ಲಿ ಗುರುವಾರ ಏರ್ಪಡಿಸಿದ್ದ ಸಾಮರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಾಂಧೀಜಿಯ ರಾಮ ರಾಜ್ಯದ ಕನಸು ನನಸಾಗಬೇ ಕಾದರೆ ಎಲ್ಲರೂ ಒಟ್ಟಾಗಿ ದುಡಿಯ ಬೇಕು. ಗ್ರಾಮೀಣಾಭಿವೃದ್ಧಿಯಲ್ಲಿ ಯುವ ಜನತೆ ಮುಂದಿರುವುದು ಸಂತೋಷದ ವಿಚಾರ ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲ ನಾಗರಾಜ ತರಬೇತಿಯ ಕುರಿತು ಮಾಹಿತಿ ನೀಡಿದರು. ಉಪನ್ಯಾಸ ಕರಾದ ಗುರುಬಸಪ್ಪ, ರಾಘವೇಂದ್ರ ಪ್ರಭು ಉಪಸ್ಥಿತರಿದ್ದರು. ಮಂಜುನಾಥ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT