ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಧನ ಅಂತಿಮ ದರ್ಶನಕ್ಕೆ ಜನಸಾಗರ

ಹುಬ್ಬಳ್ಳಿಯಿಂದ ಬೆಟದೂರಿಗೆ ಮೆರವಣಿಗೆಯಲ್ಲಿ ಪಾರ್ಥಿವ ಶರೀರ
Last Updated 12 ಫೆಬ್ರುವರಿ 2016, 6:14 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಯೋಧ ಲ್ಯಾನ್ಸ್‌ ನಾಯಕ್‌ ಹನುಮಂತಪ್ಪ ಕೊಪ್ಪದ ಅವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ಅವರ ಹುಟ್ಟೂರು ಕುಂದಗೋಳ ತಾಲ್ಲೂಕಿನ ಬೆಟದೂರಿನ ಗ್ರಾಮ ಪಂಚಾಯ್ತಿ ಕಚೇರಿ ಪಕ್ಕದಲ್ಲಿಯೇ ಇರುವ ಸರ್ಕಾರಿ ಜಾಗದಲ್ಲಿ ನಡೆಯಲಿದೆ.

ಗುರುವಾರ ರಾತ್ರಿ 10.20ರ ಸುಮಾರಿಗೆ ವಾಯುಪಡೆ ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರವನ್ನು ಹುಬ್ಬಳ್ಳಿಗೆ ತರಲಾಯಿತು. ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಬೆಟದೂರು ಯೋಧನ ಅಂತಿಮ ದರ್ಶನಕ್ಕೆ ಜನಸಾಗರ ಹರಿದುಬಂತು. ಸಾವಿರಾರು ಜನರು  ಅಂತಿಮ ದರ್ಶನ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಅನಂತಕುಮಾರ್ ನಮನ ಸಲ್ಲಿಸಿದರು.

ಮೆರವಣಿಗೆಯಲ್ಲಿ ಬೆಟದೂರಿಗೆ:  ಯೋಧನ ಪಾರ್ಥಿವ ಶರೀರವನ್ನು ಹುಬ್ಬಳ್ಳಿಯಿಂದ ಮೆರವಣಿಗೆಯಲ್ಲಿ ಹುಟ್ಟೂರಿಗೆ ತರಲಾಗುತ್ತಿದೆ. ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದು  ವಂದೇ ಮಾತರಂ ಘೋಷಣೆ ಮುಗಿಲು ಮುಟ್ಟಿದೆ.

ಗ್ರಾಮಕ್ಕೆ ತಲುಪಿದ ನಂತರ ಹೊರವಲಯದಲ್ಲಿರುವ ನಡೂರಮಠ ಪ್ರೌಢಶಾಲೆಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ನಂತರ ಅಂತ್ಯಕ್ರಿಯೆ ನಡೆಯಲಿದೆ.

ಹನುಮಂತಪ್ಪ ಅವರ ಪತ್ನಿ, ತಾಯಿ, ಸಹೋದರರು ಮತ್ತು ಸಂಬಂಧಿಕರು ದೆಹಲಿಯಿಂದ ಬೆಟದೂರಿಗೆ ವಾಪಾಸ್ಸಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT