ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ಷಣಾ ತಂಡ ಹಿಂಪಡೆಯಲಿರುವ ಭಾರತ

Last Updated 4 ಮೇ 2015, 13:46 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭೂಕಂಪದಿಂದ ತತ್ತರಿಸಿರುವ ನೇಪಾಳದಿಂದ 34 ರಾಷ್ಟ್ರಗಳ ಜತೆಗೆ ಭಾರತವೂ ತಮ್ಮ ರಕ್ಷಣಾ ತಂಡಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳಲಿದೆ ಎಂದು ಸರ್ಕಾರ ಸೋಮವಾರ ತಿಳಿಸಿದೆ.

‘ಭೂಕಂಪ ಸಂಭವಿಸಿ ಒಂಬತ್ತು ದಿನಗಳು ಕಳೆದಿದ್ದು, ಎಲ್ಲಾ 34 ರಾಷ್ಟ್ರಗಳ ರಕ್ಷಣಾ ತಂಡಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳುವಂತೆ ಕೋರಲಾಗಿದೆ’ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್‌ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಮುಗಿದಿದ್ದು, ಪರಿಹಾರ ಹಾಗೂ ಪುನರ್ವಸತಿ ಒದಗಿಸುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದೂ ಅವರು ತಿಳಿಸಿದ್ದಾರೆ.

‘ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆಯ ಹಂತ ಮುಗಿದಿದೆ. ಭಾರತದ ಪರಿಹಾರ ಪ್ರಯತ್ನಗಳು ಮುಂದುವರಿಯಲಿವೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಏಪ್ರಿಲ್ 25ರಂದು ಪ್ರಬಲ ಭೂಕಂಪ ಸಂಭವಿಸಿದ ಬೆನ್ನಲ್ಲೆ ನೇಪಾಳಕ್ಕೆ ಸ್ಪಂದಿಸಿದ ರಾಷ್ಟ್ರಗಳ ಪೈಕಿ ಭಾರತ ಮೊದಲ ಸ್ಥಾನದಲ್ಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT