ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಣಜಿ: ಇತಿಹಾಸ ಬರೆದ ರಾಹುಲ್‌

Last Updated 30 ಜನವರಿ 2015, 14:51 IST
ಅಕ್ಷರ ಗಾತ್ರ

ಬೆಂಗಳೂರು : ಭರವಸೆಯ ಬ್ಯಾಟ್ಸ್‌ಮನ್‌ ಕೆ.ಎಲ್‌. ರಾಹುಲ್‌ ಉತ್ತರ ಪ್ರದೇಶ ಎದುರಿನ ರಣಜಿ ಪಂದ್ಯದಲ್ಲಿ ತ್ರಿಶತಕ ಗಳಿಸುವ ಮೂಲಕ ಕರ್ನಾಟಕದ ರಣಜಿ ಇತಿಹಾಸದಲ್ಲಿ ಹೊಸ ದಾಖಲೆ ಬರೆದರು.

ರಣಜಿ ಮತ್ತು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಕರ್ನಾಟಕದ ಯಾವ ಬ್ಯಾಟ್ಸ್‌ಮನ್‌ ಕೂಡಾ ಮೊದಲು ತ್ರಿಶತಕ ಬಾರಿಸಿರಲಿಲ್ಲ. ರೋಲಂಡ್‌ ಬ್ಯಾರಿಂಗ್ಟನ್‌ 283 ರನ್‌ ಗಳಿಸಿದ್ದು ಹಿಂದಿನ ದಾಖಲೆಯಾಗಿತ್ತು.

ರಾಹುಲ್ 671 ನಿಮಿಷಗಳ ಕಾಲ ಕ್ರೀಸ್‌ನಲ್ಲಿದ್ದರು. 448 ಎಸೆತಗಳಲ್ಲಿ 47 ಬೌಂಡರಿ ಮತ್ತು 4 ಸಿಕ್ಸರ್‌ ಸೇರಿದಂತೆ 337 ರನ್‌ ಗಳಿಸಿದರು. ಖಾಜಿ 117 ರನ್‌ ಗಳಿಸಿ ಕರ್ನಾಟಕ ಸವಾಲಿನ ಮೊತ್ತ ಕಲೆ ಹಾಕಲು ಕಾರಣರಾದರು.

ಇದರಿಂದ ಕರ್ನಾಟಕ ತಂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಟ್ಟು ಗರಿಷ್ಠ ಮೊತ್ತ ಕಲೆ ಹಾಕಿದ ಸಾಧನೆ ಮಾಡಿತು. ಶುಕ್ರವಾರದ ಅಂತ್ಯಕ್ಕೆ ರಾಜ್ಯ ತಂಡ  175 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 719 ರನ್‌ ಕಲೆ ಹಾಕಿತು. ಮೊದಲ ಇನಿಂಗ್ಸ್‌ ಆರಂಭಿಸಿರುವ ಉತ್ತರ ಪ್ರದೇಶ ಮೂರು ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 10 ರನ್‌ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT