ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ತೆರವಿಗೆ ಚಾಲನೆ: ಧರಣಿ ಅಂತ್ಯ

Last Updated 6 ಅಕ್ಟೋಬರ್ 2015, 9:59 IST
ಅಕ್ಷರ ಗಾತ್ರ

ಬಾಗೇಪಲ್ಲಿ: ತಾಲ್ಲೂಕಿನ ಮಿಟ್ಟೇಮರಿ ಹೋಬಳಿ ಚೊಕ್ಕಂಪಲ್ಲಿ ಗ್ರಾಮದಲ್ಲಿ ನಕಾಶೆ ರಸ್ತೆ ತೆರವುಗೊಳಿಸುವ ಕಾರ್ಯಕ್ಕೆ ಅಧಿಕಾರಿಗಳು ಚಾಲನೆ ನೀಡಿದ್ದರಿಂದ ರೈತಸಂಘ ಹಾಗೂ ಹಸಿರು ಸೇನೆ ಆಶ್ರಯದಲ್ಲಿ ಕಳೆದ 22 ದಿನದಿಂದ ತಾಲ್ಲೂಕು ಕಚೇರಿ ಎದುರು ನಡೆಯುತ್ತಿದ್ದ ಧರಣಿಯನ್ನು ಕಚೇರಿ ಆವರಣದಲ್ಲಿ ಗಿಡ ನೆಡುವ ಮೂಲಕ ಹಿಂಪಡೆಯಲಾಯಿತು.

ತಹಶೀಲ್ದಾರ್ ಎಂ.ನಾಗರಾಜ್, ಸರ್ಕಲ್ ಇನ್‌ಸ್ಪೆಕ್ಟರ್ ಸಿ.ವಸಂತ್, ಸಬ್ ಇನ್‌ಸ್ಪೆಕ್ಟರ್ ಬೈರ ಸಿಬ್ಬಂದಿಯೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಎರಡೂ ಗುಂಪುಗಳ ನಡುವೆ ಮಾತುಕತೆ ನಡೆಸಿ 8 ನಕಾಶೆ ರಸ್ತೆ ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದ ಹಿನ್ನೆಲೆಯಲ್ಲಿ ಧರಣಿ ಸ್ಥಗಿತಗೊಳಿಸಲಾಯಿತು ಎಂದು ರೈತಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಗುಂಡ್ಲಪಲ್ಲಿ ನಾರಾಯಣಸ್ವಾಮಿ ತಿಳಿಸಿದರು.

ರೈತ ಸಂಘದ ಕಾರ್ಯದರ್ಶಿ ಗಂಗಿರೆಡ್ಡಿ, ಮುಖಂಡರಾದ ಅಶ್ವತ್ಥನಾರಾಯಣರೆಡ್ಡಿ, ವೆಂಕಟರಾಯಪ್ಪ, ಲಕ್ಷಣರೆಡ್ಡಿ, ಲಕ್ಷ್ಮಿನರಸಮ್ಮ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT