ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಧಾನಿಗೆ ವಿಶೇಷ ಪ್ಯಾಕೇಜ್‌ ಘೋಷಿಸಿ

ವಾಟಾಳ್‌ ನಾಗರಾಜ್‌
Last Updated 26 ಫೆಬ್ರುವರಿ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘2015–16ರ ಬಜೆಟ್‌­ನಲ್ಲಿ ಬೆಂಗಳೂರು ನಗರಾಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು’ ಎಂದು ವಾಟಾಳ್‌ ನಾಗರಾಜ್‌ ಒತ್ತಾಯಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದ ಅಭಿವೃ­ದ್ಧಿಗೆ ವಾಹನ ದಟ್ಟಣೆ ಅಡ್ಡಿಯಾ­ಗಿದೆ. ಇದನ್ನು  ಬಗೆಹರಿಸುವ ನಿಟ್ಟಿನಲ್ಲಿ ನಗರದ ನಾಲ್ಕೂ ವಲಯಗಳಲ್ಲಿ ಕನಿಷ್ಠ 25 ಮೇಲ್ಸೇತುವೆಗಳನ್ನು ನಿರ್ಮಿಸುವ ಅಗತ್ಯವಿದೆ’ ಎಂದರು.

ಬಿಬಿಎಂಪಿ, ಬೆಸ್ಕಾಂ, ಬಿಡಿಎ, ಬಿಎಂ­ಟಿಸಿ ಮತ್ತು ಒಳಚರಂಡಿ ಮಂಡಳಿ­ಗಳು ನಗರವನ್ನು ನರಕವನ್ನಾಗಿಸಿವೆ. ಸರ್ಕಾರಿ ಆಸ್ಪತ್ರೆಗಳು ಅವ್ಯವಸ್ಥೆಯ ಆಗರವಾಗಿವೆ.  ಜನರು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದು­ರಿಸುವಂತಾಗಿದೆ ಎಂದರು.

ಸರ್ಕಾರದ ಗಮನಸೆಳೆಯುವ ನಿಟ್ಟಿ­ನಲ್ಲಿ ಫೆ.28ರಂದು ವಿಧಾನಸೌಧದ  ಮುಂದೆ ಈಡುಗಾಯಿ ಒಡೆಯುವ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT