ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಕ್ಕೆ 450 ವೈದ್ಯ ಸೀಟು

3ಸರ್ಕಾರಿ ಕಾಲೇಜುಗಳಿಗೆ ಎಂಸಿಐ ಅನುಮತಿ
Last Updated 3 ಜೂನ್ 2015, 19:30 IST
ಅಕ್ಷರ ಗಾತ್ರ

‌ಬೆಂಗಳೂರು: ಗದಗ, ಕೊಪ್ಪಳ ಮತ್ತು ಕಲಬುರ್ಗಿ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ಅನುಮತಿ ನೀಡಿದೆ. ಅಲ್ಲದೆ ಈ ಕಾಲೇಜುಗಳಲ್ಲಿ ತಲಾ 150 ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲು  ಒಪ್ಪಿಗೆ ಕೊಟ್ಟಿದೆ.

ಇದರಿಂದ ಈ ಸಲ ಹೆಚ್ಚುವರಿಯಾಗಿ 450 ಸರ್ಕಾರಿ ವೈದ್ಯಕೀಯ ಸೀಟುಗಳು ಲಭ್ಯವಾಗಲಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ಈ ವರ್ಷದ ಸರ್ಕಾರಿ ವೈದ್ಯಕೀಯ ಸೀಟುಗಳ ಲಭ್ಯತೆ ಬಗ್ಗೆ ಎರಡು ಮೂರು ದಿನದಲ್ಲಿ ಸ್ಟಷ್ಟ ಮಾಹಿತಿ ದೊರಕಲಿದೆ. ಈ  ವರ್ಷವೂ 2900 ಸೀಟುಗಳು ಲಭ್ಯವಾಗಬಹುದು ಎಂಬ ನಿರೀಕ್ಷೆ ನಮ್ಮದು’ ಎಂದರು.

ಹೆಚ್ಚು ಶುಲ್ಕ ಪಡೆಯುವಂತಿಲ್ಲ: ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ ವೈದ್ಯಕೀಯ ಸೀಟಿಗೆ ₨55 ಸಾವಿರ ಶುಲ್ಕ ನಿಗದಿಪಡಿಸಲಾಗಿದೆ. ಅದಕ್ಕಿಂತ  ಹೆಚ್ಚು ಶುಲ್ಕ ವಸೂಲು ಮಾಡುವ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ವೃತ್ತಿ ಶಿಕ್ಷಣ ಕೋರ್ಸ್‌ ಪ್ರವೇಶಾತಿ ದೂರುಗಳ ವಿಚಾರಣೆಗೆ ಪ್ರೊ. ಎಸ್‌.ಕೆ. ಸೈದಾಪುರ ನೇತೃತ್ವದಲ್ಲಿ ಏಕ ಸದಸ್ಯ ಸಮಿತಿ ಇದೆ. ಸಮಿತಿಗೆ ಇದುವರೆಗೆ 110 ದೂರುಗಳು ಬಂದಿವೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT