ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಾದ್ಯಂತ ಮಳೆಯಾಗುವ ಸಾಧ್ಯತೆ

Last Updated 3 ಜೂನ್ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು:  ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ  8 ಸೆಂ.ಮೀ ಹಾಗೂ ಹಾಸನ ಜಿಲ್ಲೆಯ ದುದ್ದದಲ್ಲಿ 7 ಸೆಂ.ಮೀ ಮಳೆಯಾಗಿದೆ.

ಗುತ್ತಲ 6, ಕದ್ರಾ, ವಿರಾಜಪೇಟೆ 5, ಸುಳ್ಯ, ಬೇಲೂರು 4, ಕಳಸ, ಕಲಘಟಗಿ, ಕೊಟ್ಟೂರು, ಪಿರಿಯಾಪಟ್ಟಣ 3, ಸಿದ್ದಾಪುರ, ರಾಣೆಬೆನ್ನೂರು, ಲಕ್ಷ್ಮೇಶ್ವರ, ಭದ್ರಾವತಿ, ಚಿಕ್ಕಮಗಳೂರು, ಲಕ್ಕವಳ್ಳಿ, ಹೊಸದುರ್ಗ, ಕಿಬ್ಬನಹಳ್ಳಿ 2, ಬನವಾಸಿ,  ಮುಂಡಗೋಡ, ನವಲಗುಂದ, ಹಾವೇರಿ, ಸವಣೂರು, ಗದಗ, ಲಿಂಗದಹಳ್ಳಿ, ಕೋಲಾರ, ಶ್ರೀನಿವಾಸಪುರ, ಬಂಗಾರಪೇಟೆ, ನೆಲಮಂಗಲ ಹಾಗೂ ಹೊನ್ನಾಳಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT