ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಕೆಲವೆಡೆ ಭಾರಿ ಮಳೆ

Last Updated 15 ಜೂನ್ 2016, 3:46 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ಸಿಡಿಲು ಬಡಿದು ಮೂರು ಜಾನುವಾರು ಮೃತಪಟ್ಟಿವೆ.
ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಸೋಮವಾರ ರಾತ್ರಿ ಮಳೆಯಾಗಿದ್ದು, ಭಟ್ಕಳ ತಾಲ್ಲೂಕಿನ ಕಾಯ್ಕಿಣಿಯಲ್ಲಿ ಬಾವಿಯೊಂದಕ್ಕೆ ಹಾನಿಯಾಗಿದೆ.
ಹೊನ್ನಾವರ, ಕುಮಟಾ, ಕಾರವಾರ, ಹಳಿಯಾಳ, ಶಿರಸಿ, ಸಿದ್ದಾಪುರದಲ್ಲಿ ಸಾಧಾರಣ ಮಳೆಯಾಗಿದೆ.  

ಶಿವಮೊಗ್ಗ ವರದಿ: ಜಿಲ್ಲೆಯಾದ್ಯಂತ ಮಂಗಳವಾರ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ ನಗರದಲ್ಲಿ ಸೋಮ ವಾರ ಮಧ್ಯರಾತ್ರಿ ಜಿಟಿಜಿಟಿ ಮಳೆ ಸುರಿದಿದೆ. ಸಾಗರ, ಹೊಸನಗರ, ಶಿಕಾರಿಪುರ ಮತ್ತು ತೀರ್ಥಹಳ್ಳಿ ತಾಲ್ಲೂಕಿನಲ್ಲಿ  ಸಾಧಾರಣ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ದಿನವಿಡೀ ಮೋಡದ ವಾತಾವರಣವಿತ್ತು.

ಕುಂದಾಪುರದಲ್ಲಿ 11 ಸೆಂ.ಮೀ ಮಳೆ
ಬೆಂಗಳೂರು:
ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿಯ ಹಲವೆಡೆ ಹಾಗೂ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗಿದೆ.

ಕುಂದಾಪುರದಲ್ಲಿ 11 ಸೆಂ.ಮೀ ಮಳೆಯಾಗಿದೆ. ಮಂಕಿ 9, ಕಾರವಾರ 7, ಧರ್ಮಸ್ಥಳ, ಆಗುಂಬೆ 5, ಕುಮಟಾ 4, ಮಂಗಳೂರು, ಬಂಟ್ವಾಳ, ಅಂಕೋಲಾ 3, ಪಣಂಬೂರು, ಸುಬ್ರಹ್ಮಣ್ಯ, ಮಡಿ ಕೇರಿ, ಭಾಗಮಂಡಲ, ರಾಮನಗರ 2, ಹೊಸನಗರ, ಶೃಂಗೇರಿಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಹಲವೆಡೆ ಹಾಗೂ ರಾಜ್ಯದ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ.
ಜೂನ್ 15 ರಿಂದ 19 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ಬೀಳುವ ನಿರೀಕ್ಷೆಯಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT