ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಕ್ರಮ ‘ನಾಚಿಗೆಗೇಡು’

Last Updated 2 ಜೂನ್ 2015, 19:30 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಅಕ್ರಮ ಆಸ್ತಿ ಸಂಗ್ರಹ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರನ್ನು ದೋಷಮುಕ್ತಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ಗೆ ಹೋಗಲು ನಿರ್ಧರಿಸಿರುವ ಕರ್ನಾಟಕ  ಸರ್ಕಾರದ ಕ್ರಮ ನಾಚಿಗೆಗೇಡು ಎಂದು ಎಐಎಡಿಎಂಕೆ ಟೀಕಿಸಿದೆ.

‘18 ವರ್ಷಗಳ ಹಳೆಯ ಪ್ರಕರಣದಲ್ಲಿ ಹೈಕೋರ್ಟ್‌ ಜಯಲಲಿತಾ ಅವರನ್ನು ಖುಲಾಸೆಗೊಳಿಸಿದ ನಂತರವೂ ಕರ್ನಾಟಕ ಸರ್ಕಾರ ಅದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದು ನಾಚಿಗೆಗೇಡು’ ಎಂದು ಎಐಎಡಿಎಂಕೆ ಮುಖವಾಣಿ ಪತ್ರಿಕೆಯಲ್ಲಿ ಟೀಕಿಸಲಾಗಿದೆ.

ನಮ್ಮ ನಾಯಕಿ ಜಯಲಲಿತಾ ತಮ್ಮ ಪ್ರಾಮಾಣಿಕತೆ ಸಾಬೀತುಪಡಿಸುತ್ತಾರೆ ಎಂದು ಎಐಎಡಿಎಂಕೆ ವಿಶ್ವಾಸ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT