ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆಗೆ ಚುನಾವಣೆ

ಜೂನ್‌ನಲ್ಲಿ ಪರಿಷತ್ತಿನ 11 ಸ್ಥಾನಗಳೂ ಭರ್ತಿ
Last Updated 20 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಿಗೇ ರಾಜ್ಯ ಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಎದುರಾಗಲಿದೆ.

ರಾಜ್ಯಸಭೆಯ ನಾಲ್ಕು ಹಾಗೂ ಪರಿಷತ್ತಿನ 11 ಸ್ಥಾನಗಳಿಗೆ ಜೂನ್‌ನಲ್ಲಿ ಚುನಾವಣೆ ನಡೆಯಲಿದೆ. ಮೇ 16ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳು ಮತ್ತೆ ಅಖಾಡಕ್ಕೆ ಧುಮುಕಲಿವೆ.

ರಾಜ್ಯ ವಿಧಾನಸಭೆಯಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಎಸ್‌.ಎಂ .ಕೃಷ್ಣ, ಬಿ.ಕೆ.ಹರಿಪ್ರಸಾದ್, ಬಿಜೆಪಿ ಮುಖಂಡರಾದ ಪ್ರಭಾಕರ ಕೋರೆ, ಎಂ.ರಾಮಾಜೋಯಿಸ್‌ ಅವರ ಸದಸ್ಯತ್ವದ ಅವಧಿ ಜೂನ್‌ 25ಕ್ಕೆ ಮುಗಿಯಲಿದೆ. ಅದಕ್ಕೂ ಮೊದಲೇ ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಕಾಂಗ್ರೆಸ್‌ ಎರಡು ಸ್ಥಾನಗಳನ್ನು ಹಾಗೂ ಬಿಜೆಪಿ ಒಂದು ಸ್ಥಾನವನ್ನು ಸುಲಭವಾಗಿ ಗಳಿಸಲಿವೆ. ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್, ಜೆಡಿಎಸ್‌ ನಡುವೆ ಪೈಪೋಟಿ ನಡೆಯಲಿದೆ.

ವಿಧಾನಪರಿಷತ್: ವಿಧಾನಸಭೆ ಯಿಂದ ವಿಧಾನ ಪರಿಷತ್‌ಗೆ ಆಯ್ಕೆ ಯಾಗಿರುವ ಏಳು ಮಂದಿ ಸದಸ್ಯರು ಜೂನ್‌ 30ರಂದು ನಿವೃತ್ತರಾಗಲಿದ್ದಾರೆ.

ಇದರಲ್ಲಿ ಬಿಜೆಪಿಯ ನಾಲ್ವರು, ಜೆಡಿಎಸ್‌ನ ಇಬ್ಬರು ಹಾಗೂ ಕಾಂಗ್ರೆಸ್‌ನ ಒಬ್ಬ ಸದಸ್ಯರು ಸೇರಿದ್ದಾರೆ.ವಿಧಾನಸಭೆಯಲ್ಲಿ ಕಾಂಗ್ರೆಸ್‌ಗೆ ಇರುವ ಸಂಖ್ಯಾಬಲದ ಆಧಾರದ ಮೇಲೆ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಲ್ಕು ಸ್ಥಾನಗಳನ್ನು ಗಳಿಸ­ಲಿದೆ. ಬಿಜೆಪಿ, ಜೆಡಿಎಸ್‌ ತಲಾ ಒಂದು ಸ್ಥಾನವನ್ನು ಸುಲಭ­ವಾಗಿ ಗಳಿಸಲಿವೆ. ಮತ್ತೊಂದು ಸ್ಥಾನಕ್ಕೆ ಪೈಪೋಟಿ ನಡೆಯಲಿದೆ.

ಪದವೀಧರ ಕ್ಷೇತ್ರ: ಆಗ್ನೇಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಎ.ಎಚ್‌.ಶಿವಯೋಗಿಸ್ವಾಮಿ ಅವರ ಅವಧಿ ಜೂನ್‌ 30ಕ್ಕೆ ಮುಗಿಯಲಿದೆ.

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮೋಹನ್‌ ಲಿಂಬಿಕಾಯಿ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಅವರ ಸದಸ್ಯತ್ವದ ಅವಧಿ ಜೂನ್ 30ರವರೆಗೂ ಇತ್ತು.

ಈ ಎರಡೂ ಕ್ಷೇತ್ರಗಳಿಗೆ ಜೂನ್‌ನಲ್ಲಿ ಚುನಾವಣೆ ನಡೆಯಲಿದ್ದು ಈ ತಿಂಗಳ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟ­ವಾಗಲಿದೆ. 2013ರ ವಿಧಾನಸಭಾ ಚುನಾ­ವಣೆಗೂ ಮುನ್ನ ಬಿಜೆಪಿಗೆ ರಾಜೀನಾಮೆ ನೀಡಿ ಕೆಜೆಪಿ ಸೇರಿದ್ದ ಮೋಹನ್ ಲಿಂಬಿಕಾಯಿ, ಮರಳಿ ಬಿಜೆಪಿ ಸೇರಿದ್ದಾರೆ. ಅಲ್ಲದೆ ಜೂನ್‌ನಲ್ಲಿ ನಡೆಯುವ ಚುನಾವಣೆಯಲ್ಲಿ ಆ ಪಕ್ಷದಿಂದಲೇ ಸ್ಪರ್ಧಿಸಲು ಸಿದ್ಧತೆ ನಡೆಸಿ­ದ್ದಾರೆ. ವಿಧಾನ ಪರಿಷತ್‌ನ ಸದಸ್ಯ ಬಸವರಾಜ ಹೊರಟ್ಟಿ ಪುತ್ರ ವಸಂತ ಹೊರಟ್ಟಿ ಅವರು ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಶಿಕ್ಷಕರ ಕ್ಷೇತ್ರ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಅಯ್ಕೆಯಾಗಿರುವ ಜೆಡಿಎಸ್‌ನ ಪುಟ್ಟಣ್ಣ ಅವಧಿ ಜೂನ್‌ 30ಕ್ಕೆ ಮುಗಿಯಲಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಶಶೀಲ್‌ ನಮೋಶಿ ರಾಜೀನಾಮೆಯಿಂದ ಆ ಸ್ಥಾನ ತೆರವಾಗಿದೆ. ಈ ಎರಡೂ ಸ್ಥಾನಗಳಿಗೂ ಚುನಾವಣೆ ನಡೆಯಲಿದೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಗುಲ್ಬರ್ಗ ದಕ್ಷಿಣ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದ್ದ ನಮೋಶಿ ಸೋತ ನಂತರ ಬಿಜೆಪಿಗೆ ವಾಪಸಾಗಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ನಮೋಶಿ ಪ್ರಯತ್ನ ನಡೆಸಿದ್ದಾರೆ. ಆದರೆ, ಪಕ್ಷ ತೊರೆದು ಹೋಗಿದ್ದವರಿಗೆ ಈ ಸಲ ಟಿಕೆಟ್‌ ನೀಡದಂತೆ ಪಕ್ಷದಲ್ಲೇ ಕೆಲವರು ಒತ್ತಡ ಹೇರುತ್ತಿದ್ದಾರೆ. ಅಲ್ಲದೆ ಈ ಬಾರಿ ಬಿಜೆಪಿ ಟಿಕೆಟ್ ಗಿಟ್ಟಿ­ಸಲು ಖಾಸಗಿ ಕಾಲೇಜೊಂದರ ಪ್ರಾಂಶುಪಾಲ ಬಿ.ಎಸ್‌.ಮಾಕಲ್‌ ಅವರೂ ಪ್ರಯತ್ನ ನಡೆಸಿದ್ದಾರೆ.

ನಾಮಕರಣ ಸದಸ್ಯರು: ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ನಾಮಕರಣ­ಗೊಂಡಿರುವ ಪ್ರೊ.ಎಸ್‌. ಆರ್‌.ಲೀಲಾ, ದೊಡ್ಡರಂಗೇಗೌಡ, ಎಂ.ಆರ್.ದೊರೆಸ್ವಾಮಿ, ಬಿ.ಬಿ.ಶಿವಪ್ಪ ಅವರ ಅವಧಿ ಜೂನ್‌ 20ಕ್ಕೆ ಮುಕ್ತಾಯ­ವಾಗಲಿದೆ.

ಮತ್ತೊಬ್ಬ ನಾಮಕರಣ ಸದಸ್ಯ ಪ್ರೊ.ಮುಮ್ತಾಜ್ ಅಲಿ­ಖಾನ್‌ ಈಗಾಗಲೇ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದಾರೆ. ಆ ಸ್ಥಾನ ಖಾಲಿ ಇದೆ. ಪ್ರಸ್ತುತ ವಿಧಾನ ಪರಿಷತ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸದಸ್ಯರ ಬಲ 19. ಜೂನ್‌ ನಂತರ ಆ ಪಕ್ಷದ ಸಂಖ್ಯಾಬಲ ಹೆಚ್ಚಾಗಲಿದ್ದು,  ಬಿಜೆಪಿ ಬಲ ಕಡಿಮೆ ಯಾಗಲಿದೆ.

ಇದರಲ್ಲಿ ಬಿಜೆಪಿಯ ನಾಲ್ವರು, ಜೆಡಿಎಸ್‌ನ ಇಬ್ಬರು ಹಾಗೂ ಕಾಂಗ್ರೆಸ್‌ನ ಒಬ್ಬ ಸದಸ್ಯರು ಸೇರಿದ್ದಾರೆ.ವಿಧಾನಸಭೆಯಲ್ಲಿ ಕಾಂಗ್ರೆಸ್‌ಗೆ ಇರುವ ಸಂಖ್ಯಾಬಲದ ಆಧಾರದ ಮೇಲೆ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಲ್ಕು ಸ್ಥಾನಗಳನ್ನು ಗಳಿಸ­ಲಿದೆ. ಬಿಜೆಪಿ, ಜೆಡಿಎಸ್‌ ತಲಾ ಒಂದು ಸ್ಥಾನವನ್ನು ಸುಲಭ­ವಾಗಿ ಗಳಿಸಲಿವೆ. ಮತ್ತೊಂದು ಸ್ಥಾನಕ್ಕೆ ಪೈಪೋಟಿ ನಡೆಯಲಿದೆ.

ಪದವೀಧರ ಕ್ಷೇತ್ರ: ಆಗ್ನೇಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಎ.ಎಚ್‌.ಶಿವಯೋಗಿಸ್ವಾಮಿ ಅವರ ಅವಧಿ ಜೂನ್‌ 30ಕ್ಕೆ ಮುಗಿಯಲಿದೆ. ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮೋಹನ್‌ ಲಿಂಬಿಕಾಯಿ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಅವರ ಸದಸ್ಯತ್ವದ ಅವಧಿ ಜೂನ್ 30ರವರೆಗೂ ಇತ್ತು.

ಈ ಎರಡೂ ಕ್ಷೇತ್ರಗಳಿಗೆ ಜೂನ್‌ನಲ್ಲಿ ಚುನಾವಣೆ ನಡೆಯಲಿದ್ದು ಈ ತಿಂಗಳ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟ­ವಾಗಲಿದೆ. 2013ರ ವಿಧಾನಸಭಾ ಚುನಾ­ವಣೆಗೂ ಮುನ್ನ ಬಿಜೆಪಿಗೆ ರಾಜೀನಾಮೆ ನೀಡಿ ಕೆಜೆಪಿ ಸೇರಿದ್ದ ಮೋಹನ್ ಲಿಂಬಿಕಾಯಿ, ಮರಳಿ ಬಿಜೆಪಿ ಸೇರಿದ್ದಾರೆ. ಅಲ್ಲದೆ ಜೂನ್‌ನಲ್ಲಿ ನಡೆಯುವ ಚುನಾವಣೆಯಲ್ಲಿ ಆ ಪಕ್ಷದಿಂದಲೇ ಸ್ಪರ್ಧಿಸಲು ಸಿದ್ಧತೆ ನಡೆಸಿ­ದ್ದಾರೆ. ವಿಧಾನ ಪರಿಷತ್‌ನ ಸದಸ್ಯ ಬಸವರಾಜ ಹೊರಟ್ಟಿ ಪುತ್ರ ವಸಂತ ಹೊರಟ್ಟಿ ಅವರು ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಶಿಕ್ಷಕರ ಕ್ಷೇತ್ರ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಅಯ್ಕೆಯಾಗಿರುವ ಜೆಡಿಎಸ್‌ನ ಪುಟ್ಟಣ್ಣ ಅವಧಿ ಜೂನ್‌ 30ಕ್ಕೆ ಮುಗಿಯಲಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಶಶೀಲ್‌ ನಮೋಶಿ ರಾಜೀನಾಮೆಯಿಂದ ಆ ಸ್ಥಾನ ತೆರವಾಗಿದೆ. ಈ ಎರಡೂ ಸ್ಥಾನಗಳಿಗೂ ಚುನಾವಣೆ ನಡೆಯಲಿದೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಗುಲ್ಬರ್ಗ ದಕ್ಷಿಣ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದ್ದ ನಮೋಶಿ ಸೋತ ನಂತರ ಬಿಜೆಪಿಗೆ ವಾಪಸಾಗಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ನಮೋಶಿ ಪ್ರಯತ್ನ ನಡೆಸಿದ್ದಾರೆ. ಆದರೆ, ಪಕ್ಷ ತೊರೆದು ಹೋಗಿದ್ದವರಿಗೆ ಈ ಸಲ ಟಿಕೆಟ್‌ ನೀಡದಂತೆ ಪಕ್ಷದಲ್ಲೇ ಕೆಲವರು ಒತ್ತಡ ಹೇರುತ್ತಿದ್ದಾರೆ. ಅಲ್ಲದೆ ಈ ಬಾರಿ ಬಿಜೆಪಿ ಟಿಕೆಟ್ ಗಿಟ್ಟಿ­ಸಲು ಖಾಸಗಿ ಕಾಲೇಜೊಂದರ ಪ್ರಾಂಶುಪಾಲ ಬಿ.ಎಸ್‌.ಮಾಕಲ್‌ ಅವರೂ ಪ್ರಯತ್ನ ನಡೆಸಿದ್ದಾರೆ.

ನಾಮಕರಣ ಸದಸ್ಯರು: ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ನಾಮಕರಣ­ಗೊಂಡಿರುವ ಪ್ರೊ.ಎಸ್‌. ಆರ್‌.ಲೀಲಾ, ದೊಡ್ಡರಂಗೇಗೌಡ, ಎಂ.ಆರ್.ದೊರೆಸ್ವಾಮಿ, ಬಿ.ಬಿ.ಶಿವಪ್ಪ ಅವರ ಅವಧಿ ಜೂನ್‌ 20ಕ್ಕೆ ಮುಕ್ತಾಯ­ವಾಗಲಿದೆ. ಮತ್ತೊಬ್ಬ ನಾಮಕರಣ ಸದಸ್ಯ ಪ್ರೊ.ಮುಮ್ತಾಜ್ ಅಲಿ­ಖಾನ್‌ ಈಗಾಗಲೇ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದಾರೆ. ಆ ಸ್ಥಾನ ಖಾಲಿ ಇದೆ. ಪ್ರಸ್ತುತ ವಿಧಾನ ಪರಿಷತ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸದಸ್ಯರ ಬಲ 19. ಜೂನ್‌ ನಂತರ ಆ ಪಕ್ಷದ ಸಂಖ್ಯಾಬಲ ಹೆಚ್ಚಾಗಲಿದ್ದು,  ಬಿಜೆಪಿ ಬಲ ಕಡಿಮೆ ಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT