ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ 22ಕ್ಕೆ

Last Updated 2 ಆಗಸ್ಟ್ 2014, 6:19 IST
ಅಕ್ಷರ ಗಾತ್ರ

ಹಾವೇರಿ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮೈಸೂರಿನಲ್ಲಿ ಆ. 22ರಂದು ರಾಜ್ಯ ಮಟ್ಟದ ಸಮ್ಮೇಳನ ಹಾಗೂ ವಿಚಾರ ಸಂಕಿರಣ ನಡೆಯಲಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಂ. ಪಟೇಲಪಾಂಡು, ಸುಮಾರು ಒಂದು ಲಕ್ಷಕ್ಕೂ ಅಧಿಕ ನೌಕರರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಪ್ರತಿನಿಧಿಗಳಿಗೆ ಸರ್ಕಾರವು ವಿಶೇಷ ರಜೆ ಮಂಜೂರು ಮಾಡಲಿದ್ದು, ನೌಕರರು   ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಸಂಘದ ಪದಾಧಿಕಾರಿಗಳು ಅಥವಾ ರಾಜ್ಯ ಪರಿಷತ್ ಸದಸ್ಯರಲ್ಲಿ ಪ್ರತಿನಿಧಿ ಶುಲ್ಕ ಪಾವತಿಸಿ, ಕೂಪನ್ ಪಡೆಯಬೇಕು ಎಂದು ಮನವಿ ಮಾಡಿದರು.

ಸಮ್ಮೇಳನದ ಸ್ಮರಣ ಸಂಚಿಕೆಗೆ ರಾಜ್ಯ ಸರ್ಕಾರಿ ನೌಕರರಿಂದ ಲೇಖನ, ಸಾಹಿತ್ಯ, ಚುಟುಕು, ಹಾಸ್ಯ ಲೇಖನಗಳನ್ನು ಆಹ್ವಾನಿಸಲಾಗಿದೆ ಎಂದರು.

ಕೇಂದ್ರ ಸರ್ಕಾರಿ ನೌಕರರ ವೇತನ  ಪರಿಷ್ಕರಣೆಗೆ 7ನೇ ವೇತನ ಆಯೋಗ ರಚಿಸಿದ್ದು,  ಅದರಂತೆ ರಾಜ್ಯದಲ್ಲೂ ಸರ್ಕಾರಿ ನೌಕರರಿಗೆ ವೇತನ ನೀಡಬೇಕು ಎಂದು ಮುಖ್ಯಮಂತ್ರಿ ಜೊತೆ ಚರ್ಚಿಸಲಾಗಿದೆ. ನೌಕರರ ವೇತನ, ಭತ್ಯೆಗಾಗಿ ಸರ್ಕಾರ ಶೇ 23ರಷ್ಟು ಮಾತ್ರ ಖರ್ಚು ಮಾಡುತ್ತಿದೆ ಎಂಬುದನ್ನು ಅಂಕಿ ಅಂಶಗಳ ಸಹಿತ ತಿಳಿಸಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನ ಅಂತರ ಕಡಿಮೆ ಮಾಡಲು ವಿನಂತಿಸಲಾಗಿದೆ ಎಂದರು. ಸಂಘದ ರಾಜ್ಯ ಘಟಕ ಖಜಾಂಚಿ ಯೋಗಾನಂದ, ಉಪಾಧ್ಯಕ್ಷ ಜಯರಾಮಯ್ಯ, ಸಂಘಟನಾ ಕಾರ್ಯದರ್ಶಿ ಗಿರಿಗೌಡ, ಜಿಲ್ಲಾ ಘಟಕದ ಎಸ್.ಬಿ. ಕಿನ್ನಾಳ, ಚಂದ್ರಶೇಖರ ಮಾಳಗಿ, ಶಂಕರ ಸುತಾರ, ಸಿ.ವಿ. ಹಿರೇಮಠ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT