ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ್‌ಪಾಲ್‌ ಜಾಮೀನು ರದ್ದು

2006ರ ಕೊಲೆ ಪ್ರಕರಣ
Last Updated 20 ನವೆಂಬರ್ 2014, 7:02 IST
ಅಕ್ಷರ ಗಾತ್ರ

ಚಂಡೀಗಡ (ಪಿಟಿಐ): ಸ್ವಯಂಘೋಷಿತ ‘ದೇವ­ಮಾನವ’ ರಾಮ್‌ಪಾಲ್‌ ಅವರ ವಿರುದ್ಧದ 2006ರ ಕೊಲೆ ಪ್ರಕರಣದ ಜಾಮೀನನ್ನು ಗುರುವಾರ ರದ್ದುಗೊಳಿಸಿರುವ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌, ಈ ಪ್ರಕರಣ ಸಂಬಂಧ ರಾಮ್‌ಪಾಲ್‌ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪೊಲೀಸರು ರಾಮ್‌ಪಾಲ್‌ ಅವರನ್ನು ಬಂಧಿಸಿರುವ ಬೆನ್ನಲ್ಲೆ ಹೈಕೋರ್ಟ್‌ ಈ ಸೂಚನೆ ನೀಡಿದೆ. ಹರಿಯಾಣದ ಅಡ್ವೊಕೇಟ್‌ ಜನರಲ್‌ ಮತ್ತು ವಿಶೇಷ ಅಧಿಕಾರಿ, ರಾಮ್‌ಪಾಲ್‌ ಬಂಧನದ ವಿಷಯವನ್ನು ಹೈಕೋರ್ಟ್‌ಗೆ ತಿಳಿಸಿದ ಕೆಲ ಹೊತ್ತಿನಲ್ಲೆ ಈ ಆದೇಶ ನೀಡಲಾಗಿದೆ.

ನ್ಯಾಯಮೂರ್ತಿ ಎಂ.ಜಯಪಾಲ್‌ ಮತ್ತು ದರ್ಶನ್‌ ಸಿಂಗ್‌ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದ್ದು, ರಾಮ್‌ಪಾಲ್‌ ವಿರುದ್ಧ 2006ರ ಕೊಲೆ ಪ್ರಕರಣದ ಸಂಬಂಧ ಕ್ರಮ ಜರುಗಿಸುವುದು ಸ್ಪಷ್ಟವಾಗಿದೆ.

ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ನ್ಯಾಯಾಲಯ ನೀಡಿದ್ದ ಗಡುವು ಮುಗಿದರೂ ರಾಮ್‌ಪಾಲ್‌ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

ರಾಮ್‌ಪಾಲ್‌ ಅವರನ್ನು ಬಂಧಿಸಿ ವಿಚಾರಣೆಗೆ ಹಾಜರುಪಡಿಸುವಂತೆ ಹೈಕೋರ್ಟ್‌ ಹರಿಯಾಣ ಪೊಲೀಸರಿಗೆ ಸೂಚನೆ ನೀಡಿತ್ತು. ಎರಡು ವಾರಗಳ ಕಾರ್ಯಾಚರಣೆ ನಡೆಸಿದ ಪೊಲೀಸರು ಬುಧವಾರ ರಾತ್ರಿ ಸತ್‌ಲೋಕ್‌ ಆಶ್ರಮದಲ್ಲಿ ರಾಮ್‌ಪಾಲ್‌ ಅವರನ್ನು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT