ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರ ರಾಜಧಾನಿಯಲ್ಲಿ ಸಾಹಿತಿಗಳ ಪ್ರತಿಭಟನೆ

ಕೋಮುವಾದ, ಬಹುತ್ವದ ಮೇಲಿನ ದಾಳಿಗೆ ವಿರೋಧ
Last Updated 23 ಅಕ್ಟೋಬರ್ 2015, 6:01 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌): ಕೋಮುವಾದ ಮತ್ತು ಬಹುತ್ವದ ಮೇಲಿನ ದಾಳಿ ವಿರೋಧಿಸಿ ಸಾಹಿತಿಗಳು ನವದೆಹಲಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಮಂಡಿ ಹೌಸ್‌ ಸಮೀಪದ ಶ್ರೀರಾಮ್‌ ಸೆಂಟರ್‌ನಲ್ಲಿ ಸೇರಿದ ಸಾಹಿತಿಗಳು ಸಾಹಿತ್ಯ ಅಕಾಡೆಮಿಯ ಕೇಂದ್ರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದಾರೆ.

ದೇಶದ ವಿವಿಧ ಭಾಗಗಳಿಂದ ಬಂದಿದ್ದ ನೂರಕ್ಕೂ ಹೆಚ್ಚು ಮಂದಿ ಹಿರಿ ಕಿರಿಯ ಲೇಖಕರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೆರವಣಿಗೆ ನಡೆಸಿದ್ದಾರೆ.

‘ದೇಶದಲ್ಲಿ ಅಲ್ಪಸಂಖ್ಯಾತರು, ದಲಿತರು ಅಭದ್ರತೆಯಿಂದ ಬದುಕುವಂತಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಸಾಹಿತಿಗಳು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT