ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾ. ಸತ್ಯನಾರಾಯಣಗೆ ವೀಣೆ ರಾಜಾರಾವ್ ಪ್ರಶಸ್ತಿ

Last Updated 25 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ಸಂಗೀತ ಶಾಸ್ತ್ರಕ್ಕೆ ಅಪಾರ ಕೊಡುಗೆ ನೀಡಿರುವ ಮಹಾಮಹೋಪಾಧ್ಯಾಯ ಡಾ. ರಾ. ಸತ್ಯನಾರಾಯಣ ಅವರು ಪ್ರತಿಷ್ಠಿತ ‘ವೀಣೆ ರಾಜಾರಾವ್ ರಾಷ್ಟ್ರೀಯ ಪ್ರಶಸ್ತಿ’ ಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಸಂಗೀತದ ಪ್ರಸಿದ್ಧ ವಿದ್ವಾಂಸರಾಗಿದ್ದ ಗಾನಕಲಾಭೂಷಣ ವೀಣೆ ರಾಜಾರಾಯರ ಜನ್ಮಶತಮಾ ನೋತ್ಸವದ ಸಂದರ್ಭದಲ್ಲಿ ಸ್ಥಾಪಿಸ ಲಾದ ಈ ಪ್ರಶಸ್ತಿಯನ್ನು ಪ್ರತಿವರ್ಷ ಸಂಗೀತ ಕ್ಷೇತ್ರದ ಒಬ್ಬ ಸಾಧಕರಿಗೆ ನೀಡಿ ಗೌರವಿಸಲಾಗುತ್ತದೆ. ಪ್ರಶಸ್ತಿಯು ₨೨೫ ಸಾವಿರ ನಗದು ಮತ್ತು ರಜತ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಸಂಗೀತಶಾಸ್ತ್ರದಲ್ಲಿ ಅಸಾಧಾರಣ ಪಾಂಡಿತ್ಯ ಪಡೆದಿರುವ ಸತ್ಯನಾ ರಾಯಣ ಅವರು ಬಹುಮುಖ್ಯ ಶಾಸ್ತ್ರ ಗ್ರಂಥಗಳನ್ನು ಕನ್ನಡಕ್ಕೆ ತಂದಿದ್ದಾರೆ. ಪರಂಪರೆ ಮತ್ತು ಪ್ರಯೋಗಶೀಲತೆ ಎರಡೂ ಸೇರಿದ ಅವರ ಸಾಧನೆ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT