ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚ ಆರೋಪ: ಕೇಂದ್ರ ಸೇವೆ ಇಲ್ಲ

Last Updated 24 ಜುಲೈ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಐಎಎಸ್‌, ಐಎಫ್‌ಎಸ್‌, ಐಪಿಎಸ್‌ ಮತ್ತಿತರ ನಾಗರಿಕ ಆಡಳಿತಾತ್ಮಕ ಸೇವಾ ಅಧಿಕಾರಿಗಳು ಲಂಚ ಪಡೆದ ಆರೋಪಕ್ಕೆ ಗುರಿಯಾಗಿದ್ದರೆ ಅಥವಾ ವಾರ್ಷಿಕ ಆಸ್ತಿ ವಿವರ ಸಲ್ಲಿಸದೇ ಇದ್ದರೆ ಅಂಥವರನ್ನು ಎರವಲು ಸೇವೆ ಮೇಲೆ ಕೇಂದ್ರ ಸರ್ಕಾರದ ಸೇವೆಗೆ ನಿಯೋಜನೆ ಮಾಡಲು ನಿರಾಕರಿಸಬಹುದಾದ ಹೊಸ ನೀತಿಯನ್ನು ಸರ್ಕಾರ ಜಾರಿಗೊಳಿಸಿದೆ.

ಇದೇ ವೇಳೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆ­ಯರು ಮತ್ತು ಈಶಾನ್ಯ ರಾಜ್ಯಗಳಿಗೆ ಕೇಂದ್ರ ಸರ್ಕಾರಿ ಸೇವೆಯಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಆಯ್ಕೆ ಮಾನದಂಡವನ್ನು ಸಡಿಲಿಸಲು ಕೂಡ ನಿರ್ಧರಿಸಲಾಗಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾ­ಖೆಯು (ಡಿಒಪಿಟಿ) ಈ ಹೊಸ ಮಾರ್ಗ­ದರ್ಶಿ ಸೂತ್ರಗಳನ್ನು ಅಂತಿಮಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT