ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ಪ್ರಕರಣ ಎಸ್‌ಐಟಿಗೆ ನೋಟಿಸ್‌

Last Updated 7 ಅಕ್ಟೋಬರ್ 2015, 20:06 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಾಯುಕ್ತ ಸಂಸ್ಥೆ­ಯಲ್ಲಿನ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಡಿಜಿಪಿ ಕಚೇರಿ ಪ್ರಥಮ ದರ್ಜೆ ಸಹಾಯಕನಾಗಿದ್ದ ಎನ್‌.ನರಸಿಂಹಮೂರ್ತಿ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಅವರ ಜಾಮೀನು ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಸೆಪ್ಟೆಂಬರ್‌ 19ರಂದು ತಿರಸ್ಕರಿಸಿತ್ತು. ಈ ಕುರಿತ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಅವರಿದ್ದ ಏಕಸದಸ್ಯ ಪೀಠವು ಬುಧವಾರ ವಿಚಾರಣೆ ನಡೆಸಿತು.

ಈ ವೇಳೆ ಪ್ರತಿವಾದಿಗಳಾದ ವಿಶೇಷ ತನಿಖಾ ತಂಡವು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿತು. ಇದನ್ನು ಮನ್ನಿಸಿದ ನ್ಯಾಯಪೀಠವು ಎಸ್‌ಐಟಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿ  ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT