ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರದಿ ಕೇಳಿದ ಸಮಿತಿ

Last Updated 6 ಅಕ್ಟೋಬರ್ 2015, 19:58 IST
ಅಕ್ಷರ ಗಾತ್ರ

ಬೆಂಗಳೂರು: ಯುವತಿಯೊಬ್ಬಳ ಮೇಲೆ ವ್ಯಾನಿನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ ಹಾಗೂ ಅತ್ಯಾಚಾರ ನಿಯಂತ್ರಣ ಕುರಿತ ತಜ್ಞರ ಸಮಿತಿ ಪೊಲೀಸರಿಗೆ ಸೂಚಿಸಿದೆ.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ವಿ.ಎಸ್‌. ಉಗ್ರಪ್ಪ, ‘ಇದೊಂದು ಅಮಾನವೀಯ ಘಟನೆ.    ಈ ಪ್ರಕರಣದ ಬಗ್ಗೆ ಸಂಬಂಧಿಸಿದ ಡಿಸಿಪಿ ಜೊತೆ ಮಾತನಾಡಿ ವಿವರ ಪಡೆದಿದ್ದೇನೆ. ಒಂದೆರಡು ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ’ ಎಂದರು.

‘ಸಂತ್ರಸ್ತರು ನೌಕರಿಯಲ್ಲಿದ್ದರೆ, ಅವರು ಕೆಲಸ ಮಾಡುತ್ತಿರುವ ಕಂಪೆನಿಗಳನ್ನೂ ಜವಾಬ್ದಾರರನ್ನಾಗಿ ಮಾಡಬೇಕು ಎಂದು ನನಗೆ ಅನಿಸುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಇಂತಹ ಪ್ರಕರಣಗಳನ್ನು ತಡೆಯುವುದಕ್ಕಾಗಿ ವ್ಯಾನ್‌, ಟ್ಯಾಕ್ಸಿ ಸೇರಿದಂತೆ ವಾಹನಗಳ ಚಾಲಕರನ್ನು ನಿರಂತರವಾಗಿ ತಪಾಸಣೆಗೆ ಒಳಪಡಿಸುವ ಅಗತ್ಯವಿದೆ’ ಎಂದು ಉಗ್ರಪ್ಪ ಅಭಿಪ್ರಾಯ ಪಟ್ಟರು.

ಬಾಲಕಿ ಆತ್ಮಹತ್ಯೆ ವರದಿಗೆ ಸೂಚನೆ:  ನಗ್ನಗೊಳಿಸಿ ಚಿತ್ರ ತೆಗೆದಿದ್ದಕ್ಕೆ ಬೇಸರಗೊಂಡು ಚಿಕ್ಕಜಾಲ ಸಮೀಪದ ಸುಭಾಷ್‌ನಗರ
ದಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ  ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರಿಂದಲೂ ವರದಿ ಕೇಳಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT