ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾದ್ರಾ ಕಂಪೆನಿ ವಿರುದ್ಧ ಕ್ರಿಮಿನಲ್ ಪ್ರಕರಣ?

Last Updated 18 ಸೆಪ್ಟೆಂಬರ್ 2015, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರಾಜಸ್ತಾನದ ಬಿಕಾನೆರ್‌ನಲ್ಲಿ ಇರುವ ರಾಬರ್ಟ್ ವಾದ್ರಾ ಅವರಿಗೆ ಸೇರಿದೆ ಎನ್ನಲಾದ  ಸಂಸ್ಥೆಯೊಂದರ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದ್ದಾರೆ.

ಅಕ್ರಮ ಹಣ ಬಳಸಿ  ಭೂ ಕಬಳಿಕೆ ಮಾಡಿರುವ  ಪ್ರಕರಣ ಇದಾಗಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಪ್ರಕಾರ ಕ್ರಿಮಿನಲ್ ಪ್ರಕರಣ ದಾಖಲಿಸ ಲಾಗಿದೆ.

ಈ ಪ್ರಕರಣದಲ್ಲಿ ಭಾಗಿಯಾದವರಿಗೆ ಶೀಘ್ರದಲ್ಲಿಯೇ ಸಮನ್ಸ್ ಜಾರಿ ಮಾಡಲಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರಿಗೆ ಸೇರಿದ ಸಂಸ್ಥೆ ಅಕ್ರಮ ಹಣ ಬಳಸಿ ಭೂ ಕಬಳಿಕೆ ಮಾಡಿದೆ ಎಂಬ ಮಾಧ್ಯಮಗಳ ವರದಿ ಮತ್ತು ರಾಜಸ್ತಾನ ಪೊಲೀಸರು ತಹಶೀಲ್ದಾರ್ ಅವರಿಗೆ ನೀಡಿರುವ ದೂರನ್ನು ದಾಖಲಿಸಿಕೊಂಡಿ ರುವುದನ್ನು  ಆಧರಿಸಿ ತನಿಖೆ ನಡೆಸಲಾ ಯಿತು ಎಂದು ಈ ಮೂಲಗಳು ತಿಳಿಸಿವೆ.

ಪ್ರಥಮ ವರದಿ ಮಾಹಿತಿಯಲ್ಲಿ ವಾದ್ರಾ ಮತ್ತು ಅವರಿಗೆ ಸೇರಿದ ಕಂಪೆನಿಯ   ಹೆಸರನ್ನು ನಮೂದಿಸಿಲ್ಲ. ಕೆಲವು ಸರ್ಕಾರಿ ಅಧಿಕಾರಿಗಳ ಮತ್ತು ಭೂ ಮಾಫಿಯಾಗಳ ಹೆಸರುಗಳು ಎಫ್‌ಐಆರ್‌ನಲ್ಲಿ ಇದೆ.

ಪ್ರತಿಕ್ರಿಯೆಗೆ ವಾದ್ರಾ ಅವರು ಲಭ್ಯವಾಗಿಲ್ಲ. ಆದರೆ ಕಾಂಗ್ರೆಸ್, ಇದೊಂದು ರಾಜಕೀಯ ಸೇಡಿನ ಕ್ರಮ ಎಂದು ಟೀಕಿಸಿದೆ.

ವಾದ್ರಾ ಅವರು ಯಾವುದೇ ತಪ್ಪು ಮಾಡಿಲ್ಲ, ಅವರ ವಿರುದ್ಧ ಯಾವುದೇ ಪ್ರಕರಣ ಬಾಕಿ ಇಲ್ಲ, ರಾಜಕೀಯ ಸೇಡಿಗಾಗಿ ಈಗ ಪ್ರಕರಣ ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ತಾರ ಶಕೀಲ್ ಅಹಮದ್ ತಿಳಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ವಿರುದ್ಧ  ಪ್ರಕರಣ?: ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ವಿರುದ್ಧವೂ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸುವ ಸಾಧ್ಯತೆಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT