ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರದಲ್ಲಿ 35 ಗಂಟೆ ಕೆಲಸಕ್ಕಾಗಿ ಒತ್ತಾಯ

Last Updated 1 ಮೇ 2016, 19:44 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾರ್ಮಿಕರ ಕೆಲಸದ ಅವಧಿಯನ್ನು ವಾರಕ್ಕೆ 35 ಗಂಟೆಗೆ ಸೀಮಿತಗೊಳಿಸಬೇಕು. ಪ್ರತಿದಿನ 4 ಪಾಳಿಯಲ್ಲಿ ಕೆಲಸ ಮಾಡಲು ಅನುಕೂಲ ಕಲ್ಪಿಸಬೇಕು’ ಎಂದು ಒತ್ತಾಯಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಕಾರ್ಮಿಕ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ  ನೂರಾರು  ಕಾರ್ಮಿಕರು ಪಾಲ್ಗೊಂಡಿದ್ದರು.

ಈ ವೇಳೆ ಸಿಐಟಿಯು  ರಾಜ್ಯ ಘಟಕದ ಕಾರ್ಯದರ್ಶಿ ಮೀನಾಕ್ಷಿ ಸುಂದರಂ  ಮಾತನಾಡಿ, ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ’ ಎಂದು ದೂರಿದರು.

‘ಇತ್ತೀಚೆಗೆ ಗಾರ್ಮೆಂಟ್‌ ಕಾರ್ಮಿಕರು ತಮ್ಮ ಹಕ್ಕಿಗಾಗಿ ಪ್ರತಿಭಟನೆ ನಡೆಸಿದ್ದರು. ಸರ್ಕಾರವು ಅವರನ್ನು ಬಂಧಿಸಿದೆ. ಕೂಡಲೇ ಬಂಧಿತರನ್ನು ಬಿಡುಗಡೆಗೊಳಿಸಿ ಮೊಕದ್ದಮೆಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

‘ಈ ಬೇಡಿಕೆಗಳು ಈಡೇರದಿದ್ದರೆ ಸೆಪ್ಟೆಂಬರ್‌ 2ರಂದು ರಾಷ್ಟ್ರದಾದ್ಯಂತ ಮುಷ್ಕರ ಹಮ್ಮಿಕೊಳ್ಳಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದೆ.
ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎನ್‌.ಉಮೇಶ್‌ ಮಾತನಾಡಿ, ‘ಇಂದಿನ ದಿನಗಳಲ್ಲಿ ಕಾರ್ಮಿಕರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಅವರ ಅಭಿವೃದ್ಧಿಗೆ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

‘ಕಾರ್ಮಿಕರಿಗೆ ಕನಿಷ್ಠ ವೇತನ ₹18,000 ನಿಗದಿ ಮಾಡಬೇಕು. ಗುತ್ತಿಗೆ ಕಾರ್ಮಿಕರ ಕಾಯಂ, ಕಾರ್ಮಿಕ ಸಂಘಗಳ ಮಾನ್ಯತೆಗೆ ಸೂಕ್ತ ಶಾಸನ ಜಾರಿಗೊಳಿಸಬೇಕು. ಪ್ರತಿ ಜಿಲ್ಲೆಯಲ್ಲೂ ಕಾರ್ಮಿಕ ನ್ಯಾಯಾಲಯ ಸ್ಥಾಪಿಸಬೇಕು’ ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT