ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆಗೆ ಹಾಜರಾಗಲು ಮುಖ್ಯಮಂತ್ರಿ ಜಯಲಲಿತಾಗೆ ಸುಪ್ರೀಂ ಸೂಚನೆ

Last Updated 30 ಜನವರಿ 2014, 10:06 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಮೂರು ವರ್ಷಗಳ ಆದಾಯ ತೆರಿಗೆ ಪಾವತಿ ಮಾಡದಿರುವ ಹಿನ್ನೆಲೆಯಲ್ಲಿ   ಅವರು ವಿಚಾರಣೆ ಎದುರಿಸಬೇಕು ಎಂದು ಸುಪ್ರೀಂ ಕೋರ್ಟ್‌ ಗುರುವಾರ ಸೂಚಿಸಿದೆ.

ಮುಖ್ಯಮಂತ್ರಿ ಜಯಲಲಿತಾ ಅವರು ವಿಚಾರಣೆಗೆ ಹಾಜರಾಗಬೇಕು ಮತ್ತು ಈ ಪ್ರಕರಣದ ವಿಚಾರಣೆಯನ್ನು ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ನ್ಯಾಯಾಧೀಶ ಕೆ. ಎಸ್‌. ರಾಧಾಕೃಷ್ಣನ್ ಸೂಚಿಸಿದರು.

ಜಯಲಲಿತಾ ಮತ್ತು ಅವರ ಗೆಳತಿ ಶಶಿಕಲಾ ಒಡೆತನದ ಶಶಿ ಎಂಟರ್‌ಪ್ರೈಸಸ್‌ ಕಂಪೆನಿ ಕ್ರಮವಾಗಿ 1991–92, 1992–93, 1993–94ನೇ ಸಾಲಿನಲ್ಲಿ ಆದಾಯ ತೆರಿಗೆಯನ್ನು ಪಾವತಿಸಿರಲಿಲ್ಲ.

ಸುಪ್ರೀಂ ಕೋರ್ಟ್ ಆದೇಶದಿಂದ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸಂಕಷ್ಟ ಎದುರಾದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT