ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ : ಬಾಲಕ ಸೇರಿ ಏಳು ಮಂದಿ ಬಂಧನ

Last Updated 18 ಏಪ್ರಿಲ್ 2015, 20:17 IST
ಅಕ್ಷರ ಗಾತ್ರ

ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಾನೂನಿನ ಎದುರು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ಏಳು ಮಂದಿಯನ್ನು ಹನುಮಂತನಗರ ಪೊಲೀಸರು ಬಂಧಿಸಿದ್ದಾರೆ.

‘ಕೂಲಿ ಕೆಲಸಗಾರರಾದ ಸಂತೋಷ್, ಮಂಜುನಾಥ್, ಕಿರಣ್, ಮಹೇಶ್, ಪ್ರಶಾಂತ್ ಹಾಗೂ ಸೂರ್ಯ ಬಂಧಿತರು. ಇವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಮತ್ತೊಬ್ಬ ಆರೋಪಿ ಬಾಲಕನಾಗಿದ್ದು, ಆತನನ್ನು ಬಾಲಮಂದಿರಕ್ಕೆ ಒಪ್ಪಿಸಲಾಗಿದೆ’ ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು.

ಲೈಂಗಿಕ ದೌರ್ಜನ್ಯ ದೃಢಪಟ್ಟಿದೆ
ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಅಕ್ರಮ ಬಂಧನ (ಐಪಿಸಿ 342), ಅಪಹರಣ (366ಎ) ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT