ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನದ ಶೌಚಾಲಯದಲ್ಲಿ ಅಡಗಿಸಿಟ್ಟಿದ್ದ ಚಿನ್ನ ಜಪ್ತಿ

Last Updated 26 ಮೇ 2016, 23:42 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ದುಬೈನಿಂದ ಕೊಚ್ಚಿಗೆ ಬಂದಿಳಿದ ಸ್ಪೈಸ್‌ಜೆಟ್‌ ವಿಮಾನದ ಶೌಚಾಲಯದಲ್ಲಿ ಅಡಗಿಸಿ ಇಟ್ಟಿದ್ದ  ಒಂದು ಕೆ.ಜಿ. ಚಿನ್ನವನ್ನು ಜಪ್ತಿ ಮಾಡಲಾಗಿದೆ.

ಈ ಸಂಬಂಧ ಶಂಕಿತ ವ್ಯಕ್ತಿಯೊಬ್ಬರನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

‘ಪ್ರಯಾಣದ ವೇಳೆ ಪದೇ ಪದೇ ಶೌಚಾಲಯಕ್ಕೆ ಹೋಗಿ ಬರುತ್ತಿದ್ದ ವ್ಯಕ್ತಿಯ ಚಲನವಲನ ಗಮನಿಸಿದ ವಿಮಾನದ ಸಿಬ್ಬಂದಿ ಕೂಡಲೇ ಶೌಚಾಲಯದ ತಪಾಸಣೆ ನಡೆಸಿದರು.

ಆಗ ಪತ್ರಿಕೆಯಲ್ಲಿ ಸುತ್ತಿ ಅಡಗಿಸಿ ಇಟ್ಟಿದ್ದ ಚಿನ್ನ ಪತ್ತೆಯಾಗಿದೆ’ ಎಂದು ವಿಮಾನ ಸಂಸ್ಥೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT