ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಟ್ ಕೊಹ್ಲಿಗೆ ₹ 24 ಲಕ್ಷ ದಂಡ

Last Updated 3 ಮೇ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ದಲ್ಲಿ ಮಂಗಳವಾರ ನಡೆದ ಕೋಲ್ಕತ್ತ ನೈಟ್‌ ರೈಡರ್ಸ್‌ ಎದುರಿನ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್ ನಿರ್ವಹಣೆ ಮಾಡಿದ್ದಕ್ಕಾಗಿ ಆರ್‌ಸಿಬಿ ತಂಡದ ನಾಯಕ ವಿರಾಟ್‌ ಕೊಹ್ಲಿಗೆ ₹ 24 ಲಕ್ಷ ದಂಡ ವಿಧಿಸಲಾಗಿದೆ.

ಇದರಿಂದ ಕೊಹ್ಲಿ ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಒಟ್ಟು ₹ 36 ಲಕ್ಷ ದಂಡವನ್ನು ಕಟ್ಟಿದಂತಾಗಿದೆ. ಇದೇ ಟೂರ್ನಿಯ ಹಿಂದಿನ ಪಂದ್ಯದ ವೇಳೆ ಅವರಿಗೆ ₹ 12 ಲಕ್ಷ ದಂಡ ವಿಧಿಸಲಾಗಿತ್ತು.

ತಂಡದ ಉಳಿದ ಆಟಗಾರರು ₹ 6 ಲಕ್ಷ ಅಥವಾ ಪಂದ್ಯದ ಸಂಭಾವನೆಯ ಶೇ  25ರಷ್ಟು ಹಣವನ್ನು ದಂಡವಾಗಿ ಕಟ್ಟಿಬೇಕಿದೆ.

ಗಂಭೀರ್‌ಗೂ ದಂಡ: ಪಂದ್ಯದ ವೇಳೆ ಅಶಿಸ್ತಿನ ವರ್ತನೆ ತೋರಿದ ಕಾರಣಕ್ಕಾಗಿ ರೈಡರ್ಸ್  ನಾಯಕ ಗೌತಮ್‌ ಗಂಭೀರ್‌ ಅವರಿಗೂ ಪಂದ್ಯದ ಸಂಭಾವನೆಯ ಶೇ 15ರಷ್ಟು  ದಂಡ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT