ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕಪ್‌: ಪಾಕಿಸ್ತಾನಕ್ಕೆ ಐದನೇ ಸ್ಥಾನ

Last Updated 12 ಫೆಬ್ರುವರಿ 2016, 19:30 IST
ಅಕ್ಷರ ಗಾತ್ರ

ಫತುಲ್ಲಾ (ಪಿಟಿಐ): ಜೀಶನ್‌ ಮಲ್ಲಿಕ್ (93) ಅವರ ಅಮೋಘ ಆಟದ ಬಲದಿಂದ ಪಾಕಿಸ್ತಾನ ತಂಡ 19 ವರ್ಷದೊಳಗಿನವರ ವಿಶ್ವಕಪ್‌ ಪ್ಲೇ ಆಫ್‌ ಪಂದ್ಯದಲ್ಲಿ ಶುಕ್ರವಾರ ಇಂಗ್ಲೆಂಡ್‌ ಎದುರು ಏಳು ವಿಕೆಟ್‌ಗಳ ಗೆಲುವು ದಾಖಲಿಸಿ ಐದನೇ ಸ್ಥಾನ ಗಳಿಸಿದೆ.

ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 264 ರನ್‌ ದಾಖಲಿಸಿತು.

ಸವಾಲಿನ ಮೊತ್ತ ಬೆನ್ನಟ್ಟಿದ ಪಾಕ್‌ ತಂಡ 43.1 ಓವರ್‌ಗಳಲ್ಲಿಯೇ 3 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು.

ಸಂಕ್ಷಿಪ್ತ ಸ್ಕೋರು: ಇಂಗ್ಲೆಂಡ್‌: 50 ಓವರ್‌ಗಳಲ್ಲಿ 7 ವಿಕೆಟ್‌ಗೆ 264 (ಟಾಮ್ ಮೂರಿಸ್‌ 47, ಸ್ಯಾಮ್‌ ಕರೆನ್‌ 83; ಸಮೀನ್‌ ಗುಲ್‌ 42ಕ್ಕೆ2).
ಪಾಕಿಸ್ತಾನ: 43.1 ಓವರ್‌ಗಳಲ್ಲಿ 3 ವಿಕೆಟ್‌ಗೆ 265. (ಜೀಶನ್‌ ಮಲ್ಲಿಕ್‌ 93, ಸೈಫ್‌ ಬಾದರ್‌ 75; ಜಾರ್ಜ್‌ ಗಾರ್ಟನ್‌ 36ಕ್ಕೆ1).
ಫಲಿತಾಂಶ: ಪಾಕಿಸ್ತಾನಕ್ಕೆ 7 ವಿಕೆಟ್‌ಗಳ ಜಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT