ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಸ್ತ್ರಚಿಕಿತ್ಸೆಗೆ ಧನ ಸಹಾಯ

Last Updated 3 ಮೇ 2016, 19:59 IST
ಅಕ್ಷರ ಗಾತ್ರ

ಬೆಂಗಳೂರು: ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿಯ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಒಬ್ಬ ವ್ಯಕ್ತಿಗೆ ಗರಿಷ್ಠ ₹10 ಲಕ್ಷದವರೆಗೆ ಧನ ಸಹಾಯ ನೀಡಲಾಗುವುದು.  ಸಹಾಯ ಪಡೆಯುವವರು ಬಡತನ ರೇಖೆಗಿಂತ ಕೆಳಮಟ್ಟದಲ್ಲಿರಬೇಕು. ಅಂಗವಿಕಲರ ಗುರುತಿನ ಚೀಟಿ ಹೊಂದಿರಬೇಕು.

ಅರ್ಜಿದಾರರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ತಾಲ್ಲೂಕಿನಲ್ಲಿ ವಾಸವಿರಬೇಕು.
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ, ಸುಸಜ್ಜಿತ ಖಾಸಗಿ ಆಸ್ಪತ್ರೆ ಅಥವಾ ಸಂಜಯ ಗಾಂಧಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಬಹುದು.

ಚಿಕಿತ್ಸಾ ವೆಚ್ಚದ ಅಂದಾಜು ಪಟ್ಟಿ ಮತ್ತು ಶಸ್ತ್ರಚಿಕಿತ್ಸೆಯಿಂದ ಅಂಗವಿಕಲತೆ ಪ್ರಮಾಣ ಕಡಿಮೆಯಾಗುವ ಬಗ್ಗೆ ವೈದ್ಯಾಧಿಕಾರಿಗಳಿಂದ ಪಡೆದ ಪತ್ರ ಸಲ್ಲಿಸಬೇಕು.

ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಸಂಬಂಧಪಟ್ಟ ಆಸ್ಪತ್ರೆಯ ಮುಖ್ಯಸ್ಥರು ಶಸ್ತ್ರಚಿಕಿತ್ಸೆಯ ಬಗ್ಗೆ ದೃಢೀಕರಿಸಿ, ತಗಲುವ ವೆಚ್ಚವನ್ನು ನಮೂದಿಸಿ ದೇವನಹಳ್ಳಿಯಲ್ಲಿರುವ ಜಿಲ್ಲಾ ಅಂಗವಿಕಲರ ಪುನರ್‌ವಸತಿ ಕೇಂದ್ರಕ್ಕೆ ಸಲ್ಲಿಸಬೇಕು.

ಅರ್ಹ ವ್ಯಕ್ತಿಗಳಿಗೆ ಶಸ್ತ್ರಚಿಕಿತ್ಸಾ ವೆಚ್ಚವನ್ನು ಸಂಬಂಧಪಟ್ಟ ಆಸ್ಪತ್ರೆಗೆ ಪಾವತಿಸಲಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT