ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಯಲ್ಲಿ ಬೆಂಕಿ ಹಚ್ಚಿಕೊಂಡ ಬಾಲಕ

Last Updated 26 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಫರೀದಾಬಾದ್‌(ಹರಿಯಾಣ)(ಐಎಎನ್‌ಎಸ್‌): ಖಾಸಗಿ ಶಾಲೆಯ 8ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲೇ ತನ್ನ ಮೈಗೆ  ಪೆಟ್ರೋಲ್‌ ಸುರಿದುಕೊಂಡು ಬೆಂಕಿಹಚ್ಚಿಕೊಂಡ ಘಟನೆ ಇಲ್ಲಿ ಬುಧವಾರ ನಡೆದಿದೆ.

ಫರೀದಾಬಾದ್‌ನ ಹೋಲಿ ಚೈಲ್ಡ್‌ ಸ್ಕೂಲ್‌ನಲ್ಲಿ ಓದುತ್ತಿರುವ ಬಾಲಕ ಬಾಟಲಿಯಲ್ಲಿ ಪೆಟ್ರೋಲ್‌ ತುಂಬಿಕೊಂಡು ಬ್ಯಾಗಿನಲ್ಲಿ ತಂದಿದ್ದ. ಶಾಲಾ ಪ್ರಾರ್ಥನೆ ಮುಗಿದ ಬಳಿಕ  ಶೌಚಾಲಯಕ್ಕೆ ಹೋಗಿ ಬೆಂಕಿ ಹಚ್ಚಿಕೊಂಡಿದ್ದಾನೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ವಿದ್ಯಾರ್ಥಿಯ ದೇಹ ಶೇ 40ರಷ್ಟು ಸುಟ್ಟಿದ್ದು, ಆತನನ್ನು ಚಿಕಿತ್ಸೆಗಾಗಿ ದೆಹಲಿಯ ಸಫ್ದರ್‌ಜಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT