ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕಿಯಾಗಿ ಮುಖ್ಯಮಂತ್ರಿ ಜಯಾ ಪ್ರಮಾಣ

Last Updated 4 ಜುಲೈ 2015, 7:24 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಉತ್ತರ ಚೆನ್ನೈನ ರಾಧಾಕೃಷ್ಣನ್‌ ನಗರ ವಿಧಾನಸಭಾ ಕ್ಷೇತ್ರದಿಂದ ಅಭೂತ ಪೂರ್ವ ಗೆಲುವು ಕಂಡ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಶನಿವಾರ ಶಾಸಕಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ತಮಿಳುನಾಡು ವಿಧಾನಸಭೆಯಲ್ಲಿರುವ ತಮ್ಮ ಕೊಠಡಿಯಲ್ಲಿ ವಿಧಾನಸಭಾಧ್ಯಕ್ಷ ಪಿ.ಧನಪಾಲ್ ಅವರು ಜಯಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಜಯಾ ಅವರ ಸಂಪುಟದ ಸಹೋದ್ಯೋಗಿಗಳು ಈ ಕ್ಷಣಕ್ಕೆ ಸಾಕ್ಷಿಯಾದರು. ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ಕಳೆದ ವರ್ಷ ಶಿಕ್ಷೆಗೆ ಗುರಿಯಾಗಿದ್ದ ಜಯಾ ಅವರ ಶಾಸಕತ್ವ ಅನರ್ಹಗೊಂಡಿತ್ತು. ಮುಖ್ಯಮಂತ್ರಿ ಪದವಿ ಕೈಬಿಟ್ಟು ಹೋಗಿತ್ತು.

ಪ್ರಕರಣ ಸಂಬಂಧ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಾ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಆದರೆ, ನಂತರದಲ್ಲಿ ಕರ್ನಾಟಕ ಹೈಕೋರ್ಟ್‌ ಜಯಾ ಅವರನ್ನು ನಿರ್ದೋಷಿ ಎಂದು ತೀರ್ಪು ನೀಡಿದ್ದರಿಂದ ಜಯಾ ಅವರು ಮತ್ತೆ ಮುಖ್ಯಮಂತ್ರಿ ಪಟ್ಟಕ್ಕೆ ಏರಿದ್ದರು.

ಸಾಂವಿಧಾನಿಕ ಅಗತ್ಯವನ್ನು ಪೂರೈಸಲು ಜಯಾ ಅವರು ಇದೀಗ ಉಪ ಚುನಾವಣೆಯ ಮೂಲಕ ಮತ್ತೆ ತಮಿಳುನಾಡು ವಿಧಾನಸಭೆ ಶಾಸಕತ್ವ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT