ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕಿಗೆ ಇರಿದ ಸರಗಳ್ಳನನ್ನು ಹಿಡಿದ ಜನ

Last Updated 11 ಫೆಬ್ರುವರಿ 2016, 20:00 IST
ಅಕ್ಷರ ಗಾತ್ರ

ಬೆಂಗಳೂರು: ಸರ ಕೀಳುವಾಗ ಪ್ರತಿರೋಧ ತೋರಿದ ಶಿಕ್ಷಕಿಗೆ ಚಾಕುವಿನಿಂದ  ಹಲ್ಲೆ ನಡೆಸಿದ ಸರಗಳ್ಳನನ್ನು ಬೆನ್ನಟ್ಟಿ ಹಿಡಿದ ನಾಗರಿಕರು, ಹಿಗ್ಗಾಮುಗ್ಗಾ ಥಳಿಸಿ ಆತನನ್ನು ವಿಜಯನಗರ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ವಿಜಯನಗರ ನಿವಾಸಿ ನಾಗರತ್ನ (50) ಹಲ್ಲೆಗೆ ಒಳಗಾದವರು. ರಾತ್ರಿ 7.30ರ ಸುಮಾರಿಗೆ ಅವರು ಆದಿಚುಂಚನಗಿರಿ ಮಠದ  ಸಮೀಪ ನಡೆದು ಹೋಗುತ್ತಿದ್ದಾಗ ಆರೋಪಿ ಸರಕ್ಕೆ ಕೈ ಹಾಕಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ನಾಗರತ್ನ, ಸರವನ್ನು ಬಿಗಿಯಾಗಿ ಹಿಡಿದುಕೊಂಡು ನೆರವಿಗಾಗಿ ಕೂಗಿಕೊಂಡಿದ್ದಾರೆ.

ಈ ವೇಳೆ ಚಾಕು ತೆಗೆದ ಆರೋಪಿ, ಅವರ ಕೈಗಳ ಮೇಲೆ ಹಲ್ಲೆ ನಡೆಸಿದ್ದಾನೆ. ನಂತರ ಸರ ಕಿತ್ತುಕೊಂಡು ಓಡಿದಾಗ ಸ್ಥಳೀಯರು ಆತನನ್ನು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.  ನಾಗರತ್ನ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ. ಅವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

‘ನನ್ನ ಹೆಸರು ದರ್ಶನ್. ಮೈಸೂರಿನವನು. ಹಣದ ಅಗತ್ಯವಿದ್ದ ಕಾರಣಕ್ಕೆ ಈ ಕೃತ್ಯ ಎಸಗಿದೆ’ ಎಂದು ಆರೋಪಿ ಹೇಳುತ್ತಿದ್ದಾನೆ. ಆದರೆ, ಆ ಹೇಳಿಕೆಗಳನ್ನು ನಂಬಲು ಸಾಧ್ಯವಿಲ್ಲ. ಮೈಸೂರು ಪೊಲೀಸರನ್ನು ಸಂಪರ್ಕಿಸಿ, ಈತನ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT