ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಇಲಾಖೆ ಅಧೀಕ್ಷಕ ಅಮಾನತು

ಕೆಲಸ ಕೊಡಿಸುವುದಾಗಿ ₨1.10 ಕೋಟಿ ವಂಚನೆ
Last Updated 26 ನವೆಂಬರ್ 2014, 20:33 IST
ಅಕ್ಷರ ಗಾತ್ರ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ₨1.10 ಕೋಟಿ ವಂಚಿಸಿದ ಆರೋಪದ ಮೇಲೆ ಬೆಂಗಳೂರು ಉತ್ತರ ಜಿಲ್ಲೆಯ ಸಾರ್ವ­ಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಅಧೀಕ್ಷಕ ಆರ್‌.ಕೆ. ರಾಮಕೃಷ್ಣ ಅವ­ರನ್ನು ಇಲಾಖೆ ಆಯುಕ್ತ ಮೊಹಮ್ಮದ್‌ ಮೊಹ್ಸೀನ್‌ ಬುಧವಾರ ಅಮಾನತು­ಗೊಳಿಸಿದ್ದಾರೆ.

ಸರ್ಕಾರಿ ನೌಕರಿ ಕೊಡಿಸುವು­ದಾಗಿ  ನಂಬಿಸಿ ರಾಮಕೃಷ್ಣ ಅವರು 2007–08­ರಲ್ಲಿ ನಿರುದ್ಯೋಗಿ ಯುವಕರಿಂದ ಕೋಟ್ಯಂತರ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಹಾವೇರಿ ಜಿಲ್ಲೆಯ ಹಿರೇಕೆರೂರಿನ ವಸಂತ ಬಿ. ದ್ಯಾವಕ್ಕಳ­ವರ್‌ ಎಂಬುವರು ದೂರು ನೀಡಿದ್ದರು.

ದೂರಿಗೆ ಪೂರಕವಾಗಿ ರಾಮಕೃಷ್ಣ ಅವರು ಬ್ಯಾಂಕ್‌ ಖಾತೆ­ಯಿಂದ ಹಣ ಡ್ರಾ ಮಾಡಿಕೊಳ್ಳಲು  ನೀಡಿರುವ ಚೆಕ್‌ಗಳ ಪ್ರತಿ, ಕೆಪಿಎಸ್‌ಸಿ ಮತ್ತು ಸರ್ಕಾರದ ಸಚಿವಾಲಯದ ವಿವಿಧ ಇಲಾಖೆಗಳಿಂದ ನೇಮಕಾತಿ ಆದೇಶ­ಗಳನ್ನು ಹೊರಡಿಸಿದಂತೆ ಒದಗಿಸಿರುವ ನಕಲಿ ಆದೇಶಗಳ ಪ್ರತಿಗಳನ್ನು ಅವರು ಸಲ್ಲಿಸಿದ್ದರು.

ದಾಖಲೆಗಳನ್ನು ಪರಿಶೀಲಿಸಿದ ನಂತರ ರಾಮಕೃಷ್ಣ ವಂಚನೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿ­ರುವುದ­ರಿಂದ, ವಿಚಾರಣೆ ಕಾಯ್ದಿರಿಸಿ ಸೇವೆ­ಯಿಂದ ಅಮಾನತು­ಗೊಳಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT