ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಫಾರಸು ಸಮಿತಿ ಅಧ್ಯಕ್ಷರಾಗಿ ಉಗ್ರಪ್ಪ

Last Updated 29 ಮೇ 2015, 20:08 IST
ಅಕ್ಷರ ಗಾತ್ರ

ಬೆಂಗಳೂರು: ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಕಾನೂನಿನಲ್ಲಿ ತರಬೇಕಿರುವ ತಿದ್ದುಪಡಿಗಳ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡಲು ರಚಿಸಿರುವ ಸಮಿತಿಗೆ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ಸಿನ ವಿ.ಎಸ್‌. ಉಗ್ರಪ್ಪ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಜೆಡಿಎಸ್‌ ಮುಖಂಡ ಎಂ.ಸಿ. ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಆದರೆ ವೈಯಕ್ತಿಕ ಕಾರಣ ನೀಡಿ ನಾಣಯ್ಯ ಅವರು ಎರಡು ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನಂತರ ಈ ಸ್ಥಾನ ಖಾಲಿ ಉಳಿದಿತ್ತು. ಅಧ್ಯಕ್ಷರಿಲ್ಲದ ಕಾರಣ ಸಮಿತಿಯ ಸಭೆಗಳೂ ನಡೆದಿರಲಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಉಗ್ರಪ್ಪ ಅವರನ್ನು ಈ ಸ್ಥಾನಕ್ಕೆ ನೇಮಿಸಲಾಗಿದೆ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT