ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಫಾರಸು ಸಮಿತಿ ಕೈಬಿಡಲು ಸಲಹೆ

ನ್ಯಾಯಮೂರ್ತಿಗಳ ನೇಮಕ
Last Updated 28 ಜುಲೈ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸದ್ಯ ಚಾಲ್ತಿಯಲ್ಲಿರುವ ನ್ಯಾಯ­ಮೂರ್ತಿ­ಗಳ ನೇಮಕ ವ್ಯವಸ್ಥೆಯನ್ನು ಕೈಬಿಡುವಂತೆ ಹಿರಿಯ ನ್ಯಾಯಮೂರ್ತಿಗಳು ಕೇಂದ್ರ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.

ನ್ಯಾಯಾಂಗ ವ್ಯವಸ್ಥೆ ಸುಧಾರಣೆ  ಕುರಿತು ಚರ್ಚಿಸಲು ಸೋಮವಾರ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ನ್ಯಾಯಮೂರ್ತಿಗಳು  ಈ ಅಭಿಪ್ರಾಯ ವ್ಯಕ್ತಪಡಿಸಿದರು.

ನ್ಯಾಯಮೂರ್ತಿಗಳೇ ನ್ಯಾಯಾಧೀಶರನ್ನು ನೇಮಕ ಮಾಡುವ  ವ್ಯವಸ್ಥೆ ಸಮರ್ಪಕವಾಗಿಲ್ಲ. ಈ ವ್ಯವಸ್ಥೆಯನ್ನು ರದ್ದು ಮಾಡಿ ಹೊಸ ವ್ಯವಸ್ಥೆ ಆರಂಭಿಸುವಂತೆ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು. ಆದರೂ  ಮೂರೂವರೆ ತಾಸು ನಡೆದ ಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲ  ಎಂದು ಅಟಾರ್ನಿ ಜನರಲ್‌ ಮುಕುಲ್‌ ರೊಹಟಗಿ ತಿಳಿಸಿದ್ದಾರೆ.

ಸಭೆಯ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌, ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ವ್ಯವಸ್ಥೆಯಲ್ಲಿ ಹೆಚ್ಚು ಪಾರದರ್ಶಕತೆ ತರಲು ಇದೇ ಅಧಿವೇಶನದಲ್ಲಿ ‘ನ್ಯಾಯಾಂಗ ನೇಮಕ ಆಯೋಗ ಮಸೂದೆ’ ಮಂಡಿಸಲಾಗುವುದು ಎಂದು ತಿಳಿಸಿದರು.

ಹಿಂದಿನ ಯುಪಿಎ ಸರ್ಕಾರ  ಮಂಡಿಸಿದ್ದ ನ್ಯಾಯಾಂಗ ಸುಧಾರಣೆ, ನ್ಯಾಯಾಂಗ ಗುಣಮಟ್ಟ ಮತ್ತು ಉತ್ತರದಾಯಿತ್ವ ಮಸೂದೆ ಕುರಿತು ಚರ್ಚಿಸುವುದು ಇಂದಿನ ಸಭೆಯ  ಮುಖ್ಯ ಉದ್ದೇಶವಾಗಿತ್ತು. ಆದರೆ, ಸಭೆಯಲ್ಲಿ ನ್ಯಾಯಮೂರ್ತಿಗಳ ನೇಮಕಾತಿ ವ್ಯವಸ್ಥೆ ಕುರಿತಾಗಿಯೇ ಹೆಚ್ಚಿನ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT