ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀನಾ ಹತ್ಯೆ: ಅ.7ಕ್ಕೆ ಮುಂಬೈ ಹೈಕೊರ್ಟ್ ತೀರ್ಪು

ಜೈಲಿನಲ್ಲೇ ವಿಚಾರಣೆ ನಡೆಸಲು ಅನುಮತಿ ಕೋರಿ ಸಿಬಿಐ ಅರ್ಜಿ
Last Updated 6 ಅಕ್ಟೋಬರ್ 2015, 11:05 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಶೀನಾ ಬೋರಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೂವರು ಆರೋಪಿಗಳನ್ನು ಜೈಲಿನಲ್ಲೇ ವಿಚಾರಣೆಗೊಳಪಡಿಸಲು ಅನುಮತಿ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್‌ ಮಂಗಳವಾರ ವಿಚಾರಣೆ ನಡೆಸಿದ್ದು, ತೀರ್ಪನ್ನು ಅ.7ಕ್ಕೆ ಕಾಯ್ದಿರಿಸಿದೆ.

ಬಂಧನದಲ್ಲಿರುವ ಇಂದ್ರಾಣಿ ಮುಖರ್ಜಿ, ಅವರ ಮಾಜಿ ಪತಿ ಸಂಜೀವ್ ಖನ್ನಾ ಮತ್ತು ಕಾರು ಚಾಲಕ ಶಾಮ್ ರಾಯ್ ಅವರನ್ನು ಕಾರಾಗೃಹದಲ್ಲೇ ವಿಚಾರಣೆ ನಡೆಸಲು ಕನಿಷ್ಠ ಮೂರು ವಾರಗಳ ಕಾಲ ಅವಕಾಶ ನೀಡಬೇಕು ಎಂದು ಸಿಬಿಐ ಕೋರ್ಟ್‌ಗೆ ಮನವಿ ಮಾಡಿತ್ತು.

‘ಇದುವರೆಗೆ ಈ ಪ್ರಕರಣದ ವಿಚಾರಣೆಯನ್ನು ಮುಂಬೈ ಪೊಲೀಸರು ನಡೆಸುತ್ತಿದ್ದರು. ಸಿಬಿಐ ತನಿಖೆಯ ಜವಾಬ್ದಾರಿ ವಹಿಸಿಕೊಂಡು ಕೆಲವು ದಿನಗಳಷ್ಟೇ ಕಳೆದಿದೆ. ಹಾಗಾಗಿ ಆರೋಪಿಗಳನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಮುಂಬೈ ಪೊಲೀಸರು ನೀಡಿರುವ ತನಿಖಾ ವರದಿಯನ್ನೇ ಅವಲಂಬಿಸಬೇಕಾಗುತ್ತದೆ’ ಎಂದು ಸಿಬಿಐ ನ್ಯಾಯಾಲಯಕ್ಕೆ ಕೇಳಿಕೊಂಡಿತ್ತು.

ಆತ್ಮಹತ್ಯೆಗೆ ಯತ್ನಿಸಿ ಸದ್ಯ ಮುಂಬೈನ ಜೆಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಂದ್ರಾಣಿ ಮುಖರ್ಜಿಗೆ ಸಂಬಂಧಿಸಿದ ದಾಖಲೆಗಳನ್ನೂ ಪೊಲೀಸರು ಮಂಗಳವಾರ ನ್ಯಾಯಾಲಯದಲ್ಲಿ ಹಾಜರುಪಡಿಸಿದರು. 

‘ಒಂದು ವೇಳೆ ಸಿಬಿಐ ಜೈಲಿನಲ್ಲೇ ವಿಚಾರಣೆ ನಡೆಸಲು ಮುಂದಾದರೆ ಅದಕ್ಕೆ ಸಹಕರಿಸಲು ಇಂದ್ರಾಣಿ ಮುಖರ್ಜಿ ಸಿದ್ಧರಿದ್ದಾರೆ’ ಎಂದು ಅವರ ಪರ ವಕೀಲ  ಗುಂಜನ್‌ ಮಂಗಳಾ ಅವರು ನ್ಯಾಯಾಲಯಕ್ಕೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT