ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಮುಲುಗೆ ನೋಟಿಸ್

Last Updated 26 ನವೆಂಬರ್ 2014, 20:34 IST
ಅಕ್ಷರ ಗಾತ್ರ

ಬೆಂಗಳೂರು: ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿ­ಸಿದಂತೆ ವಿಚಾರಣೆಗೆ ಖುದ್ದು ಹಾಜರಾ­ಗುವಂತೆ ಸಂಸದ ಬಿ.ಶ್ರೀರಾಮುಲು ಅವರಿಗೆ ನಗರದ 13ನೇ ಎಸಿಎಂಎಂ ನ್ಯಾಯಾಲಯ ಬುಧವಾರ ನೋಟಿಸ್ ಜಾರಿ ಮಾಡಿದೆ.

ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಹಲವು ಬಾರಿ ಸೂಚನೆ ನೀಡಿದ್ದರೂ ಶ್ರೀರಾಮುಲು ಗೈರಾಗಿದ್ದರು. ಅವರ ಈ ವರ್ತನೆಗೆ ಬುಧವಾರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೋಟಿಸ್‌ ಜಾರಿ­ಗೊಳಿಸಿ ವಿಚಾರಣೆಯನ್ನು ಡಿ.12ಕ್ಕೆ ಮುಂದೂಡಿದರು.

ಬಿಎಸ್‌ಆರ್ ಪಕ್ಷದ ಸಂಸ್ಥಾಪಕ­ರಾಗಿದ್ದ ವೇಳೆ ಶ್ರೀರಾಮುಲು ಅವರು ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್ ಕೊಡುವುದಾಗಿ ಹೇಳಿ ತನ್ನಿಂದ ₨ 2.94 ಕೋಟಿ ಪಡೆದಿದ್ದರು. ಬಳಿಕ ಟಿಕೆಟ್ ನೀಡದ ಅವರು, ಹಣಕ್ಕೆ ಪ್ರತಿಯಾಗಿ ಚೆಕ್‌ ಕೊಟ್ಟಿದ್ದರು. ಆದರೆ, ಅವರ ಖಾತೆಯಲ್ಲಿ ಹಣವಿರದ ಕಾರಣ ಚೆಕ್‌ ಬೌನ್ಸ್‌ ಆಗಿತ್ತು ಎಂದು ಆರೋಪಿಸಿ ಮೈಸೂರಿನ ಸೋಮಶೇಖರ್ ಎಂಬುವರು ದೂರು ಕೊಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT