ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೇಷ್ಠ ಲೇಖಕ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Last Updated 20 ಅಕ್ಟೋಬರ್ 2014, 5:16 IST
ಅಕ್ಷರ ಗಾತ್ರ

ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 2014--–15ನೇ ಸಾಲಿನ ಶ್ರೇಷ್ಠ ಲೇಖಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕ   ­-­ಪ್ರಕಟಿಸಿದ ಲೇಖಕರಿಂದ ಅರ್ಜಿ ಆಹ್ವಾನಿ­ಸ­­ಲಾಗಿದೆ.

ಜನವರಿ, 2014ರಿಂದ ಡಿಸೆಂಬರ್‌, 2014­ರೊಳಗೆ ಮೇಲ್ಕಂಡ ವಿಷಯಗಳಲ್ಲಿ ಕನ್ನಡದಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಈ ಪ್ರಶಸ್ತಿಗೆ ಸಲ್ಲಿಸ­ಬಹುದು. ಪುಸ್ತಕಗಳ ಸಂಖ್ಯಾನು­ಗು­ಣ­ವಾಗಿ ಪ್ರತಿ ವಿಷಯಕ್ಕೆ ಗರಿಷ್ಠ 2 ಪ್ರಶಸ್ತಿಯನ್ನು ನೀಡಲಾಗು­ವುದು. ಆಯ್ಕೆಯಾದ ಲೇಖಕರಿಗೆ ₨ 25 ಸಾವಿರ ನಗದು ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾ­ಗುವುದು.

ಲೇಖಕರು ನಿಗದಿತ ನಮೂ­ನೆಯ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿ­ಗಳನ್ನು ಜನವರಿ, 2015ರೊಳಗೆ ಸದಸ್ಯ ಕಾರ್ಯ­ದರ್ಶಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರ­ಜ್ಞಾನ ಅಕಾ­ಡೆಮಿ ವಿಜ್ಞಾನ ಭವನ, 21ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು–560 070 ಇಲ್ಲಿಗೆ ಕಳುಹಿಸಬೇಕು. ವಿವರಗಳಿಗೆ ಅಕಾಡೆಮಿಯ ವೆಬ್‌­ಸೈಟ್‌ ಸಂಪರ್ಕಿಸಲು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT