ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷ. ಶೆಟ್ಟರ್‌, ಸುಮಿತ್ರಾಬಾಯಿ, ಮೊಗಸಾಲೆಗೆ ‘ಮಾಸ್ತಿ’ ಪ್ರಶಸ್ತಿ

Last Updated 29 ಏಪ್ರಿಲ್ 2015, 19:52 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಸಾಲಿನ ‘ಮಾಸ್ತಿ’ ಪ್ರಶಸ್ತಿಗೆ ಸಂಶೋಧಕ ಪ್ರೊ. ಷ. ಶೆಟ್ಟರ್‌, ವಿಮರ್ಶಕಿ ಡಾ. ಬಿ.ಎನ್‌. ಸುಮಿತ್ರಾ ಬಾಯಿ ಮತ್ತು ಸಾಹಿತಿ ಡಾ. ನಾ. ಮೊಗಸಾಲೆ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ ₹ 25 ಸಾವಿರ ನಗದು ಹಾಗೂ ಮಾಸ್ತಿ ಪ್ರಶಸ್ತಿ ಫಲಕ ಒಳಗೊಂಡಿದೆ. ‘ಜೂನ್‌ನಲ್ಲಿ ಬೆಂಗಳೂರಿನಲ್ಲಿ  ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಪ್ರಶಸ್ತಿ ಸಮಿತಿ ಅಧ್ಯಕ್ಷ ಮಾವಿನಕೆರೆ ರಂಗನಾಥನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾವಿನಕೆರೆ ರಂಗನಾಥನ್‌ ನೇತೃತ್ವದಲ್ಲಿ ಪ್ರೊ. ಎಂ.ಎಚ್‌. ಕೃಷ್ಣಯ್ಯ, ಜಿ.ಎನ್‌. ರಂಗನಾಥರಾವ್‌ ಮತ್ತು ಉಷಾ ಕೇಸರಿ ಅವರನ್ನು ಒಳಗೊಂಡ ಸಮಿತಿ ಈ ಮೂವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT