ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತ್ರಸ್ತೆಯರಿಗೆ ನೆರವು ಕೇಂದ್ರ: ಮೇನಕಾ

Last Updated 2 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌): ಅತ್ಯಾಚಾರ­ಕ್ಕೊಳಗಾದ ಸಂತ್ರಸ್ತೆಯರಿಗೆ ರಕ್ಷಣೆ, ವೈದ್ಯಕೀಯ ಚಿಕಿತ್ಸೆ ಮತ್ತು ಕಾನೂನು ನೆರವು ಕಲ್ಪಿಸಲು ದೇಶದ ಎಲ್ಲಾ ಜಿಲ್ಲೆಗಳಲ್ಲಿ ವಿಶೇಷ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಮೇನಕಾ ಗಾಂಧಿ ಅವರು ಸೋಮವಾರ ಇಲ್ಲಿ ಘೋಷಿಸಿದರು.

ಈ ಯೋಜನೆಗೆ ಸುಮಾರು ₨500 ಕೋಟಿ ಖರ್ಚು ಬರಲಿದ್ದು, ಈ ವರ್ಷಾಂತ್ಯಕ್ಕೆ ವಿಶೇಷ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಸುದ್ದಿಗಾರರಿಗೆ ವಿವರಿಸಿದರು.

‘ಈ ಯೋಜನೆಗೆ ನಮ್ಮ ಬಳಿ ಹಣವಿದೆ. ಅಗತ್ಯಬಿದ್ದಲ್ಲಿ ನಿರ್ಭಯಾ ನಿಧಿಯಿಂದ ಹಣ ಬಳಸಿಕೊಳ್ಳಲಾಗುವುದು’ ಎಂದು ತಿಳಿಸಿದರು.
2012ರ ಡಿಸೆಂಬರ್‌ನಲ್ಲಿ ದೆಹಲಿ ಸಾಮೂ­ಹಿಕ ಅತ್ಯಾಚಾರ ಘಟನೆ ಬಳಿಕ ಅತ್ಯಾಚಾರ­ಕ್ಕೊಳಗಾದ ಸಂತ್ರಸ್ತೆಯರ ಕಲ್ಯಾಣ­ಕ್ಕಾಗಿ ಕೇಂದ್ರ ಸರ್ಕಾರ ನಿರ್ಭಯಾ ನಿಧಿ ಸ್ಥಾಪಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT