ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಭ್ರಮದ ಕನ್ನಡ ರಾಜ್ಯೋತ್ಸವ

Last Updated 1 ನವೆಂಬರ್ 2014, 8:24 IST
ಅಕ್ಷರ ಗಾತ್ರ

ಬೆಂಗಳೂರು: 59ನೇ ಕನ್ನಡ ರಾಜ್ಯೋತ್ಸವವನ್ನು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ರಾಜ್ಯೋತ್ಸವದ ಶುಭಾಶಯ ಕೋರಿದರು.

ಎರಡು ಕಾಲಿನ ಮೃಗಗಳು
‘ನಗರದ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳು ಹೀನ ಕೃತ್ಯಗಳಾಗಿವೆ. ಮೂರೂ ಪ್ರಕರಣಗಳಲ್ಲೂ ಎರಡು ಕಾಲಿನ ಮೃಗಗಳು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಹೀನ ಕೃತ್ಯ ಎಸಗಿವೆ. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ’ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಪ್ರತ್ಯೇಕ ರಾಜ್ಯದ ಕೂಗಿಗೆ ಕಿಮ್ಮತ್ತು ಬೇಡ
‘ಪ್ರತ್ಯೇಕ ರಾಜ್ಯದ ಕೂಗಿಗೆ ಕಿಮ್ಮತ್ತು ಕೊಡುವುದು ಬೇಡ. ಅಖಂಡ ಕರ್ನಾಟಕವನ್ನು ಒಡೆಯುವ ಮಾತುಬೇಡ. ಒಡಕು ಮಾತುಗಳಿಗೆ ಕಿವಿಗೊಡದಿರಿ’ ಎಂದು ಅವರು ಹೇಳಿದರು.

ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಾವಿರಾರು ಸಂಖ್ಯೆಯಲ್ಲಿ ಕ್ರೀಡಾಂಗಣದಲ್ಲಿ ನೆರೆದಿದ್ದ ಪ್ರೇಕ್ಷಕರು ಈ ಸಂದರ್ಭಕ್ಕೆ ಸಾಕ್ಷಿಯಾದರು.

ಮೋದಿ ಶುಭಾಶಯ:
ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನಾಡಿನ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.
‘ಕರ್ನಾಟಕ ಉನ್ನತಿ ಹಾಗೂ ಪ್ರಗತಿಯ ಪಥದಲ್ಲಿ ಸಾಗಲಿ’ ಎಂದು ಮೋದಿ ಸಂದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT