ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಶೋಧಕ ಕಲಬುರ್ಗಿ ಅಂತಿಮ ದರ್ಶನಕ್ಕೆ ಜನಸಾಗರ

Last Updated 31 ಆಗಸ್ಟ್ 2015, 8:39 IST
ಅಕ್ಷರ ಗಾತ್ರ

ಧಾರವಾಡ: ಕನ್ನಡದ ಹಿರಿಯ ಸಾಹಿತಿ, ಸಂಶೋಧಕ, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಎಂ.ಎಂ. ಕಲಬುರ್ಗಿ (77) ಅವರನ್ನು ಭಾನುವಾರ ಬೆಳಿಗ್ಗೆ ಇಲ್ಲಿನ ಕಲ್ಯಾಣನಗರದ ಅವರ ನಿವಾಸದಲ್ಲಿ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಸೋಮವಾರ ಅಂತಿಮ ದರ್ಶನಕ್ಕೆ ಜನ ಸಾಗರವೇ ಹರಿದು ಬರುತ್ತಿದೆ.

ಬೆಳಿಗ್ಗೆಯಿಂದಲೇ ಜನಸಾಗರ ಹರಿದುಬರುತ್ತಿದ್ದು, ಕರ್ನಾಟಕ ಕಲಾ ಕಾಲೇಜಿನ ಮೈದಾನದಲ್ಲಿ ಕಲಬುರ್ಗಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ 11ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ವಿವಿಧ ಮಠಾಧೀಶರು, ಹಾಗೂ ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದರು. ಬಳಿಕ ಮೆರವಣಿಗೆ ಮೂಲಕ ಕರ್ನಾಟಕ ವಿಶ್ವವಿದ್ಯಾಲಯದ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲು ತೆಗೆದುಕೊಂಡು ಹೋಗಲಾಗುತ್ತಿದೆ.

ಮಧ್ಯಾಹ್ನ 1ಕ್ಕೆ ಅಂತ್ಯಕ್ರಿಯೆ ನಡೆಯಲಿದೆ. ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.
ಕಲಬುರ್ಗಿ ಅವರ ಹತ್ಯೆ ಕುರಿತು ಮಧ್ಯಾಹ್ನ 12ಕ್ಕೆ ವಿವಿಧ ಮಠಾಧೀಶರ ದುಂಡು ಮೇಜಿನ ಸಭೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT