ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್‌ ಭವನದ ಎದುರು ಕಾಂಗ್ರೆಸ್‌ ಪ್ರತಿಭಟನೆ

Last Updated 4 ಆಗಸ್ಟ್ 2015, 6:29 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದ 25 ಕಾಂಗ್ರೆಸ್‌ ಸದಸ್ಯರನ್ನು ಸ್ಪೀಕರ್‌ ಸುಮಿತ್ರಾ ಮಹಾಜನ್‌ ಸೋಮವಾರ 5 ದಿನಗಳ ಅವಧಿಗೆ ಅಮಾನತು ಮಾಡಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷ  ಸಂಸತ್‌ ಭವನದ ಮುಂದೆ ಪ್ರತಿಭಟನೆ ನಡೆಸುತ್ತಿದೆ.

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ಚೌಹಾಣ್‌ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷದ ಸದಸ್ಯರು ನಿನ್ನೆ ಗದ್ದಲ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಒಟ್ಟು ಕಾಂಗ್ರೆಸ್‌ ಸದಸ್ಯರಲ್ಲಿ 25 ಮಂದಿಯನ್ನು ಸ್ಪೀಕರ್‌ ಅಮಾನತುಗೊಳಿಸಿದ್ದರು.

ಪ್ರತಿಭಟನೆಯ ನೇತೃತ್ವವನ್ನು ಕಾಂಗ್ರೆಸ್‌  ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ವಹಿಸಿದ್ದಾರೆ. ಕಾಂಗ್ರೆಸ್‌ ಉಪಾಧ್ಯಕ್ಷ  ರಾಹುಲ್‌ ಗಾಂಧಿ, ಮಾಜಿ ಪ್ರಧಾನಮಂತ್ರಿ ಮನಮೋಹನ್‌ ಸಿಂಗ್‌ ಸೇರಿದಂತೆ ಕಾಂಗ್ರೆಸ್‌ ಸಂಸದರು ಪ್ರತಿಭಟನೆ ನಡೆಸುತ್ತಿದ್ದಾರೆ. 

ಸಂಸತ್ತಿನ ಮುಂಗಾರು ಅಧಿವೇಶನ ಆರಂಭದಿಂದಲೂ ಆರೋಪಿ ಸಚಿವರು, ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್‌ ಪ್ರತಿಭಟನೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT