ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸ್ಕೃತ ಪರೀಕ್ಷೆ ಇಲ್ಲ: ಕೋರ್ಟ್‌ಗೆ ಪ್ರಮಾಣಪತ್ರ

Last Updated 15 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ರಸಕ್ತ  ಶೈಕ್ಷಣಿಕ ಸಾಲಿನ ಮಧ್ಯದಲ್ಲಿ ಜರ್ಮನ್‌ ಭಾಷೆ­ಯ ಬದಲು ಸಂಸ್ಕೃತವನ್ನು ತೃತೀಯ ಭಾಷೆ­ಯನ್ನಾಗಿ ಆಯ್ಕೆ ಮಾಡಿ­­ಕೊಂಡ ವಿದ್ಯಾರ್ಥಿಗಳು  ತೃತೀಯ ಭಾಷೆಯ ಪರೀಕ್ಷೆ ಬರೆಯಬೇಕಾಗಿಲ್ಲ ಎಂದು ಕೇಂದ್ರೀಯ ವಿದ್ಯಾಲಯ ಸಂಘಟನೆ (ಕೆ.ವಿ.ಎಸ್‌) ಸೋಮವಾರ ಸುಪ್ರೀಂ­ಕೋರ್ಟ್‌ಗೆ  ಪ್ರಮಾಣ ಪತ್ರ ಸಲ್ಲಿಸಿದೆ.

ಕೇಂದ್ರೀಯ ವಿದ್ಯಾಲಯಗಳಲ್ಲಿ ಜರ್ಮನ್‌ ಬದಲು ಸಂಸ್ಕೃತವನ್ನು ತೃತೀಯ ಭಾಷೆಯನ್ನಾಗಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಆಕ್ಷೇಪಣಾ ಅರ್ಜಿ­ಯನ್ನು ಸುಪ್ರೀಂಕೋರ್ಟ್‌ ಮಂಗಳ­ವಾರ ಕೈಗೆತ್ತಿಕೊಳ್ಳಲಿದೆ. ಇದರಿಂದಾಗಿ ಕೇಂದ್ರೀಯ ವಿದ್ಯಾಲಯ ಸಂಘಟನೆ ಸೋಮವಾರವೇ ಈ ಪ್ರಮಾಣ ಪತ್ರ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT