ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿನ್‌ಗೆ ಶುಭಾಶಯಗಳ ಸುರಿಮಳೆ

ಬ್ಯಾಟಿಂಗ್‌ ಚಾಂಪಿಯನ್‌ಗೆ 42 ವರ್ಷ
Last Updated 24 ಏಪ್ರಿಲ್ 2015, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 42ನೇ ವರ್ಷಕ್ಕೆ ಕಾಲಿರಿಸಿದ ಸಚಿನ್‌ ತೆಂಡೂಲ್ಕರ್‌ ಅವರ ಹುಟ್ಟಿದ ದಿನ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಸುರಿಮಳೆ..

ಮಾಜಿ ಆಟಗಾರರು ಸೇರಿದಂತೆ ಕ್ರಿಕೆಟ್‌ ದಿಗ್ಗಜರು, ಅಭಿಮಾನಿಗಳು ಸಚಿನ್‌ ತೆಂಡೂಲ್ಕರ್ ಅವರಿಗೆ ಟ್ವಿಟರ್‌, ಫೇಸ್‌ಬುಕ್‌ಗಳಲ್ಲಿ ಶುಭಾಶಯ ಕೋರಿದ್ದಾರೆ. ‘ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಒಳ್ಳೆಯದು ಮಾಡಲಿ’ ಎಂದು ಅನಿಲ್‌ ಕುಂಬ್ಳೆ ಟ್ವೀಟ್‌ ಮಾಡಿದ್ದಾರೆ.

ಮುಂಬೈ ತಂಡದ ನಾಯಕ  ರೋಹಿತ್‌ ಶರ್ಮ, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನಾಯಕ ವಿರಾಟ್‌ ಕೊಹ್ಲಿ, ಇಶಾಂತ್‌ ಶರ್ಮ, ಮಾಜಿ ಆಟಗಾರ ಮೊಹಮ್ಮದ್ ಕೈಫ್‌, ಇರ್ಫಾನ್‌ ಪಠಾಣ್‌ ಕೂಡ ಟ್ವಿಟರ್‌ನಲ್ಲಿ ಸಚಿನ್‌ ಜನ್ಮದಿನಕ್ಕೆ ಶುಭ ಕೋರಿದ್ದಾರೆ.
ಬಿಸಿಸಿಐ ಕೂಡ ಟ್ವಿಟರ್‌ನಲ್ಲಿ ಸಚಿನ್‌ ತೆಂಡೂಲ್ಕರ್‌ಗೆ ಶುಭ ಹಾರೈಸಿದೆ.

ಮನೆಯಲ್ಲೂ ಸಂಭ್ರಮ: ಬ್ಯಾಟಿಂಗ್‌ ಚಾಂಪಿಯನ್‌ ಸಚಿನ್‌ ಮನೆಯಲ್ಲಿ ಶುಕ್ರವಾರ ಸಂಭ್ರಮ ಮನೆ ಮಾಡಿತ್ತು. ಪತ್ನಿ ಅಂಜಲಿ ಮತ್ತು ತಾಯಿ ರಜನಿ ಸೇರಿದಂತೆ ಇತರ ಕುಟುಂಬ ಸದಸ್ಯರ ಜೊತೆ ಕೇಕ್‌ ಕತ್ತರಿಸಿ ಖುಷಿ ಪಟ್ಟರು. ತಾಯಿಗೆ ಕೇಕ್‌ ತಿನ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT