ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವಂ ಕೇರಳ ರಾಜ್ಯಪಾಲ

Last Updated 3 ಸೆಪ್ಟೆಂಬರ್ 2014, 14:21 IST
ಅಕ್ಷರ ಗಾತ್ರ

ನವದೆಹಲಿ : ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಳನಿಸ್ವಾಮಿ ಸದಾ­­ಶಿವಂ ಅವರು ಕೇರಳ ರಾಜ್ಯ­ಪಾ­ಲ­ರಾಗಿ ಬುಧವಾರ ನೇಮಕಗೊಂಡಿದ್ದಾರೆ.

ಬುಧವಾರ ಸಂಜೆ ಇದಕ್ಕೆ ಸಂಬಂಧಿಸಿದ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಶೀಲಾ ದೀಕ್ಷಿತ್‌ ರಾಜೀನಾಮೆಯಿಂದ ತೆರವುಗೊಂಡಿದ್ದ ಸ್ಥಾನವನ್ನು ಸದಾಶಿವಂ ತುಂಬಲಿದ್ದಾರೆ. ಸದಾಶಿವಂ ತಮಿಳುನಾಡಿನ ಈರೋಡ್‌ ಮೂಲದವರು.

ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅವರು 2007ರಲ್ಲಿ ನೇಮಕಗೊಂಡಿದ್ದರು. 2014ರವರೆಗೆ ಕಾರ್ಯನಿರ್ವಹಿಸಿದ್ದರು. ಇದಕ್ಕೂ ಮುನ್ನ ಅವರು ಮದ್ರಾಸ್‌ ಹೈಕೋರ್ಟ್‌ ಮತ್ತು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ  ನ್ಯಾಯಮೂರ್ತಿ­ಯಾಗಿದ್ದರು.

ಕೇರಳ ರಾಜ್ಯ­ಪಾ­ಲ­­ರಾಗಿ ತಮ್ಮನ್ನು ನೇಮಕ ಮಾಡಿದ ಕ್ರಮವನ್ನು ಸದಾಶಿವಂ ಸಮರ್ಥಿಸಿಕೊಂಡಿದ್ದಾರೆ.

ನಿವೃತ್ತ ನ್ಯಾಯಮೂರ್ತಿಗಳನ್ನು ರಾಜ್ಯಪಾಲರ ಹುದ್ದೆಗೆ ನೇಮಕ ಮಾಡುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿರುವ ಅವರು, ಅನಗತ್ಯ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿರುವ ಆಪಾದನೆಯನ್ನು ತಳ್ಳಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT