ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸನ್‌ರೈಸರ್ಸ್‌ಗೆ ಐಪಿಎಲ್‌ ಕಿರೀಟ

Last Updated 29 ಮೇ 2016, 20:10 IST
ಅಕ್ಷರ ಗಾತ್ರ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ದಲ್ಲಿ ಭಾನುವಾರ ಕಂಡು ಬಂದ ರೋಚಕ ಹೋರಾಟದಲ್ಲಿ ಆರ್‌ಸಿಬಿ ಗೆಲುವಿನ ಹೊಸ್ತಿಲಲ್ಲಿ ಎಡವಿತು. ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಐಪಿಎಲ್‌ ಒಂಬತ್ತನೇ ಆವೃತ್ತಿಯಲ್ಲಿ ಚಾಂಪಿಯನ್‌ ಆಯಿತು.

ಸನ್‌ರೈಸರ್ಸ್ ತಂಡ ಪ್ರಶಸ್ತಿ ಗೆಲ್ಲಲು ನಾಯಕ ಡೇವಿಡ್‌ ವಾರ್ನರ್‌ ಪ್ರಮುಖ ಕಾರಣರಾದರು. ಅತ್ಯಂತ ಯೋಜನಾ ಬದ್ಧ ನಾಯಕತ್ವದ ಜೊತೆಗೆ ವಾರ್ನರ್‌ ಬ್ಯಾಟಿಂಗ್‌ನಲ್ಲಿಯೂ ಅಬ್ಬರಿಸಿದರು.

ಬೆಂಗಳೂರಿನ ತಂಡ 2009 ಮತ್ತು 2011ರ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿ ನಿರಾಸೆ ಕಂಡಿತ್ತು. ಈ ಬಾರಿಯೂ ರನ್ನರ್ಸ್ ಅಪ್‌ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಸನ್‌ರೈಸರ್ಸ್‌ ತಂಡ ಆಡಿದ ಚೊಚ್ಚಲ ಫೈನಲ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT